ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಜನರು ಟ್ರಾಫಿಕ್ ಸಮಸ್ಯೆ ಅನುಭವಿಸುತ್ತಲೇ ಇದ್ದಾರೆ. ಇದರ ಮಧ್ಯದಲ್ಲಿ ಫ್ಲೈಓವರ್ ಕಾಮಗಾರಿಯಿಂದ ಮತ್ತಷ್ಟು ಟ್ರಾಫಿಕ್ ಸಮಸ್ಯೆ ಎದುರಿಸುವಂತಾಗಿದೆ.
ಹುಬ್ಬಳ್ಳಿಯ ಪ್ರತಿಷ್ಠಿತ ರಸ್ತೆಯಲ್ಲಿ ಒಂದಾಗಿರುವ ನೀಲಿಜನ ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆಯಿಂದ ಜನರು ಕಂಗಾಲಾಗಿದ್ದು, ಇಕ್ಕಟ್ಟಾದ ರಸ್ತೆಯಲ್ಲಿ ಸಂಚರಿಸುವ ಸಂದರ್ಭದಲ್ಲಿ ಅಪಘಾತ ಸಂಭವಿಸುತ್ತಲೇ ಇದೆ. ಹೌದು.. ನೀಲಿಜನ ರಸ್ತೆಯಲ್ಲಿ ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಬಸ್ ಹಾಗೂ ಕ್ಯಾಂಟರ್ ಡಿಕ್ಕಿ ಹೊಡೆದಿದ್ದು, ಕೆಲಕಾಲ ಟ್ರಾಫಿಕ್ ಸಮಸ್ಯೆ ಉಂಟಾಯಿತು. ವಾಹನಗಳು ಸ್ವಲ್ಪ ಪ್ರಮಾಣದಲ್ಲಿ ಜಖಂಗೊಂಡಿದ್ರೂ ಕೂಡ ಬಹುತೇಕ ಪ್ರಮಾಣದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿ ಜನರು ಪರದಾಡುವಂತಾಯಿತು.
ಈಗಾಗಲೇ ಸಾಕಷ್ಟು ಟ್ರಾಫಿಕ್ ಕಂಟ್ರೋಲ್ ರೂಲ್ಸ್ ಜಾರಿಗೊಳಿಸಿದರೂ ಕೂಡ ಅವಳಿನಗರದಲ್ಲಿ ಟ್ರಾಫಿಕ್ ನಿಯಂತ್ರಣ ಮಾತ್ರ ಸಾಧ್ಯವಾಗುತ್ತಿಲ್ಲ. ಭಾರೀ ಪ್ರಮಾಣದ ವಾಹನಗಳಿಗೆ ಪ್ರತ್ಯೇಕ ಮಾರ್ಗವನ್ನು ಕಲ್ಪಿಸುವ ಮೂಲಕ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಕಾರ್ಯವನ್ನು ಮಾಡಬೇಕಿದೆ.
Kshetra Samachara
02/08/2022 03:05 pm