ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ರಸ್ತೆಯಲ್ಲಿ ಗುಂಡಿಯೋ..? ಗುಂಡಿಯೊಳು ರಸ್ತೆಯೋ?

ಧಾರವಾಡ: ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಮೊದಲ ಬಸ್ ನಿಲ್ದಾಣದಿಂದ ಹಳೆಯ ಬಸ್ ನಿಲ್ದಾಣದವರೆಗೆ ಇರುವ ರಸ್ತೆ ಹದಗೆಟ್ಟು ಸಾರ್ವಜನಿಕರು ಹೈರಾಣಾಗಿದ್ದಾರೆ. ಈ ರಸ್ತೆ ನೋಡಿದರೆ ರಸ್ತೆಯಲ್ಲಿ ಗುಂಡಿ ಬಿದ್ದಿವೆಯೋ ಗುಂಡಿಯಲ್ಲೇ ರಸ್ತೆ ಮಾಡಲಾಗಿದೆಯೋ ಎಂದು ಜನ ಪ್ರಶ್ನೆ ಮಾಡುವಂತಾಗಿದೆ.

ಈ ರಸ್ತೆ ಹದಗೆಟ್ಟು ಅನೇಕ ತಿಂಗಳು ಕಳೆದಿದ್ದರೂ ಇದರ ಸುಧಾರಣೆ ಮಾತ್ರ ಕನಸಿನ ಮಾತಾಗಿ ಉಳಿದಿದೆ. ಮಳೆಯಾದ್ರೆ ಸಾಕು ಗುಂಡಿಗಳಲ್ಲಿ ನೀರು ನಿಂತು ಕೆರೆಯಂತಾಗುತ್ತವೆ. ಈ ರಸ್ತೆಯಲ್ಲಿ ಅನೇಕ ಬಾರಿ ಬಸ್‌ಗಳ ಎಕ್ಸೆಲ್ ಕಟ್ ಆಗಿ ಮಾರ್ಗ ಮಧ್ಯೆಯೇ ನಿಂತ ಸಾಕಷ್ಟು ಉದಾಹರಣೆ ಇವೆ.

ಉಪ್ಪಿನ ಬೆಟಗೇರಿ ಗ್ರಾಮದ ಮೊದಲ ಬಸ್ ನಿಲ್ದಾಣದಿಂದ ಹಳೆಯ ಬಸ್ ನಿಲ್ದಾಣದವರೆಗೆ ಕಾಂಕ್ರೀಟ್ ರಸ್ತೆ ಮಾಡಲಾಗುತ್ತದೆ ಎಂಬ ಮಾತುಗಳು ಕೇಳಿ ಬಂದರೂ ಇದುವರೆಗೂ ಆ ಕಾರ್ಯ ಕೈಗೂಡಿಲ್ಲ. ಈ ರಸ್ತೆಯಲ್ಲಿ ಪ್ರಯಾಣಿಕರು ನರಕಯಾತನೆ ಅನುಭವಿಸುತ್ತಿರುವುದಂತೂ ಸುಳ್ಳಲ್ಲ. ಕೂಡಲೇ ಜನಪ್ರತಿನಿಧಿಗಳು ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಇದರತ್ತ ಗಮನಹರಿಸಿ ಸಾರ್ವಜನಿಕರ ಕಷ್ಟಕ್ಕೆ ಸ್ಪಂದಿಸಬೇಕಿದೆ.

Edited By : Somashekar
Kshetra Samachara

Kshetra Samachara

30/08/2022 03:17 pm

Cinque Terre

25.98 K

Cinque Terre

0

ಸಂಬಂಧಿತ ಸುದ್ದಿ