ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಬೆಲೆ ಏರಿಕೆ ವಿರುದ್ಧ ಬೀದಿಗಿಳಿದ ಬಡವರು

ಧಾರವಾಡ: ದಿನನಿತ್ಯ ಅಗತ್ಯ ವಸ್ತು, ಗ್ಯಾಸ್ ಸಿಲಿಂಡರ್ ಸೇರಿದಂತೆ ಇತ್ಯಾದಿ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವುದರ ವಿರುದ್ಧ ಧಾರವಾಡದಲ್ಲಿ ಆರ್ಥಿಕವಾಗಿ ಹಿಂದುಳಿದವರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ಎಸ್‌ಯುಸಿಐ ಪಕ್ಷದ ನೇತೃತ್ವದಲ್ಲಿ ನೂರಾರು ಜನ ಧಾರವಾಡದಲ್ಲಿ ಪ್ರತಿಭಟನಾ ರ್ಯಾರಲಿ ನಡೆಸಿ, ಜಿಲ್ಲಾಧಿಕಾರಿ ಕಚೇರಿಗೆ ಬಂದು ಕೆಲಹೊತ್ತು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಸಕ್ಕರೆ, ಅಡುಗೆ ಎಣ್ಣೆ, ಆಹಾರ ಧಾನ್ಯಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ಅಗತ್ಯ ವಸ್ತುಗಳನ್ನು ಪಡಿತರ ಚೀಟಿ ಮುಖಾಂತರ ಉಚಿತವಾಗಿ ವಿತರಣೆ ಮಾಡಬೇಕು. ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಚೀಟಿ ಮಾಡಿಸುವ ಕೌಂಟರ್‌ಗಳನ್ನು ಹೆಚ್ಚಿಸಿ ಸೂಕ್ತ ಆರೋಗ್ಯ ಸೌಲಭ್ಯ ಕಲ್ಪಿಸಬೇಕು. ಕಿಮ್ಸ್ ಮಾದರಿಯಲ್ಲೇ ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗುವಂತೆ ಮಾಡಬೇಕು. ಕೊಳಚೆ ನಿವಾಸಿಗಳಿಗೆ ಹಕ್ಕುಪತ್ರ ಹಾಗೂ ನಿವೇಶನ ರಹಿತರಿಗೆ ನಿವೇಶನಗಳನ್ನು ಒದಿಸಬೇಕು. ಕುಡಿಯುವ ನೀರಿನ ಖಾಸಗೀಕರಣ ರದ್ದು ಮಾಡಿ, ಬಾಕಿ ಇರುವ ನೀರಿನ ಬಿಲ್ಲನ್ನು ಮನ್ನಾ ಮಾಡಬೇಕು ಹಾಗೂ ಕೋಮು ಸೌಹಾರ್ಧತೆ ಕದಡುತ್ತಿರುವ ಶಕ್ತಿಗಳನ್ನು ನಿಯಂತ್ರಿಸಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Edited By : Somashekar
Kshetra Samachara

Kshetra Samachara

23/06/2022 04:11 pm

Cinque Terre

73.11 K

Cinque Terre

29

ಸಂಬಂಧಿತ ಸುದ್ದಿ