ಅಳ್ನಾವರ: ಅಳ್ನಾವರ - ಧಾರವಾಡ ಮಾರ್ಗ ಮಧ್ಯೆ ಕುಂಬಾರಕೊಪ್ಪ ರೈಲ್ವೆ ಗೇಟ್ ಬಳಿ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿತ್ತು. ರಸ್ತೆಯಲ್ಲಿ ದೊಡ್ಡ ದೊಡ್ಡ ತಗ್ಗು,ಗುಂಡಿಗಳು ಬಿದ್ದು ದಿನ ನಿತ್ಯ ಪ್ರಯಾಣಿಕರು ಹರಸಾಹಸ ಪಟ್ಟು ಜೀವ ಭಯದಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದನ್ನರಿತ ಪಬ್ಲಿಕ್ ನೆಕ್ಸ್ಟ್ ಸುದ್ದಿ ವಾಹಿನಿಯು "ರಸ್ತೆ ಅಭಿವೃದ್ಧಿ ಇಲ್ಲಾ, ಅಪಘಾತ ತಪ್ಪಿದ್ದಲ್ಲ" ಎಂಬ ಶೀರ್ಷಿಕೆಯಡಿ ನಿನ್ನೆ ಸುದ್ದಿಯೊಂದನ್ನು ಪ್ರಸಾರ ಮಾಡಿತ್ತು.
ಸುದ್ದಿ ಪ್ರಸಾದವಾದ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು ಹಾಗೂ ರಾಜಕಾರಣಿಗಳು ಸ್ವಲ್ಪ ಪ್ರಮಾಣದ ಸಿಮೆಂಟ್ ಮಿಶ್ರಿತ ಕಡಿಯಿಂದ ತಗ್ಗುಗಳನ್ನ ಭರ್ತಿ ಮಾಡಿದ್ದಾರೆ. ಪ್ರಯಾಣಿಕರು ಅಪಘಾತದ ಭಯವಿಲ್ಲದೇ ಪ್ರಯಾಣ ಮಾಡಬಹುದಾಗಿದೆ. ಆದರೆ ಇದು ತಾತ್ಕಾಲಿಕವಾಗಿದೆ. ದಿನನಿತ್ಯ ಭಾರೀ ವಾಹನಗಳು ಓಡಾಡುವ ರಸ್ತೆ ಇದಾಗಿದ್ದು, ಸಂಪೂರ್ಣ ರಸ್ತೆ ನಿರ್ಮಾಣ ಮಾಡಿ ಪ್ರಯಾಣಿಕರಿಗೆ ಶಾಶ್ವತ ಪರಿಹಾರ ಒದಗಿಸಿಕೊಡಬೇಕಾಗಿದೆ.
ಜನಪರ ಕಾಳಜಿಯಿಂದ ಕಾರ್ಯ ನಿರ್ವಹಿಸುವ ಪಬ್ಲಿಕ್ ನೆಕ್ಸ್ಟ್ ಸುದ್ದಿ ವಾಹಿನಿಗೆ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ. ಅಳ್ನಾವರ ತಾಲೂಕಿನ ಸುದ್ದಿಗಾರರಿಗೆ ಕರೆ ಮಾಡಿ ಪಬ್ಲಿಕ್ ನೆಕ್ಸ್ಟ್ ಸುದ್ದಿ ವಾಹಿನಿಗೆ ಧನ್ಯವಾದಗಳನ್ನ ತಿಳಿಸಿದ್ದಾರೆ.
ಮಹಾಂತೇಶ ಪಠಾಣಿ, ಪಬ್ಲಿಕ್ ನೆಕ್ಸ್ಟ್, ಅಳ್ನಾವರ
Kshetra Samachara
03/09/2022 01:12 pm