ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : 20ನೇ ವಾರ್ಡ್‌ನ ಪಾಲಿಕೆ ಸದಸ್ಯರ ನಿರ್ಲಕ್ಷ, ಸಮಸ್ಯೆಯಿಂದ ಮುಕ್ತಿ ಯಾವಾಗ?

ಧಾರವಾಡ : ಮಹಾನಗರ ಪಾಲಿಕೆ, ಸ್ಮಾರ್ಟ್ ಸಿಟಿ ಎಂದೆಲ್ಲ ಹೆಗ್ಗಳಿಕೆಗೆ ಪಾತ್ರವಾದ ಧಾರವಾಡದ ಜನರ ಪರಿಸ್ಥಿತಿ ಹೇಗೆಲ್ಲ ಇದೆ ಎಂಬುದು ಎಲ್ಲರಿಗೂ ತಿಳಿದ ವಿಷಯ. ಈ ದುಸ್ಥಿತಿ ಜನ ಸಾಮಾನ್ಯರಿಗೂ ತಟ್ಟಿದೆ. ನಗರದ ವಾರ್ಡ್ ನಂಬರ್ 20ರಲ್ಲಿನ ಜನರ ದುಸ್ಥಿತಿ ಬಗ್ಗೆ ಒಂದು ವರದಿ ನೋಡಿ.

ಎಸ್... ಕಳೆದ 20 ದಿನಗಳ ಹಿಂದೆ ನಗರದ ವಾರ್ಡ್ ನಂಬರ್ 20ರ ಶ್ರೀರಾಮ್ ನಗರದ ಕರಿಯಮ್ಮ ದೇವಿ ದೇವಸ್ಥಾನದ ಬಳಿಯ ನಿವಾಸಿಗಳ ಗೋಳಿನ ಬಗ್ಗೆ ನಿಮ್ಮ ಪಬ್ಲಿಕ್ ನೆಕ್ಸ್ಟ್ ಸುದ್ದಿ ಬಿತ್ತರಿಸಿ, ವಾರ್ಡ್ ನ ಪಾಲಿಕೆ ಸದಸ್ಯೆ ಕವಿತಾ ಕಬ್ಬೆರ ಹಾಗೂ ಸಂಬಂಧ ಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿತ್ತು.

ಆದರೂ ಸಹ ಈ ಬಗ್ಗೆ ಕಿಂಚಿತ್ತೂ ಕಾಳಜಿ ತೋರದ ಅವರು ಸ್ಥಳಕ್ಕೆ ಭೇಟಿ ನೀಡಿ, ಸ್ಥಳೀಯರ ಸಮಸ್ಯೆಗೆ ಸ್ಪಂದಿಸುವ ಕೆಲಸವನ್ನು ಸಹ ಮಾಡಿಲ್ಲ ಎಂಬುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆಗಾಲದಲ್ಲಿ ಕೆಸರು ಗದ್ದೆಯಾಗಿ ಮಾರ್ಪಡುವ ರಸ್ತೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಸ್ಥಳೀಯರು ಜೀವನ ನಡೆಸುತ್ತಿದ್ದಾರೆ.

ಆದರೆ ಈ ಬಗ್ಗೆ ಜನಪ್ರತಿನಿದಿನಗಳ ಹಾಗೂ ಅಧಿಕಾರಿಗಳ ನಿರ್ಲಕ್ಷ ಎದ್ದು ಕಾಣುತ್ತಿದೆ. ಈ ರಸ್ತೆಗೆ ಶಾಶ್ವತ ಪರಿಹಾರ ನೀಡಬೇಕು ಎಂಬುದು ಸ್ಥಳೀಯರ ಆಗ್ರಹ. ಕೂಡಲೇ ಪಾಲಿಕೆ ಸದಸ್ಯೆ ಕವಿತಾ ಕಬ್ಬೆರ ಸ್ಥಳಕ್ಕೆ ಭೇಟಿ ನೀಡಿ, ಸ್ಥಳೀಯರ ಸಮಸ್ಯೆ ಆಲಿಸಬೇಕಿದೆ.

ವಿನೋದ ಇಚ್ಚಂಗಿ, ಪಬ್ಲಿಕ್ ನೆಕ್ಸ್ಟ್ ಧಾರವಾಡ

Edited By : Somashekar
Kshetra Samachara

Kshetra Samachara

27/09/2022 08:26 pm

Cinque Terre

57.23 K

Cinque Terre

3

ಸಂಬಂಧಿತ ಸುದ್ದಿ