ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಅಭದ್ರತೆ: ಆಟಕ್ಕುಂಟು ಲೆಕ್ಕಕ್ಕಿಲ್ಲ ತಪಾಸಣೆ ಯಂತ್ರ...!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ನೈಋತ್ಯ ರೈಲ್ವೆ ವಲಯದ ನಿಲ್ದಾಣ ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ನಿಜ. ಆದರೆ ಇಲ್ಲಿ ಭದ್ರತೆ ಮಾತ್ರ ಹೇಳಿಕೊಳ್ಳುವ ಮಟ್ಟಿಗೆ ಮಾತ್ರ ಇಲ್ಲವಾಗಿದೆ. ಅಲ್ಲದೆ ಸ್ಫೋಟಕ ಪ್ರಕರಣವೊಂದು ನಡೆದು ಎರಡು ವರ್ಷಗಳಾದರೂ ಇದುವರೆಗೂ ರೈಲ್ವೆ ಇಲಾಖೆ ಮಾತ್ರ ಯಾವುದೇ ರೀತಿಯ ಭದ್ರತೆ ಬಗ್ಗೆ ತಲೆ ಕಡೆಸಿಕೊಂಡಿಲ್ಲ.

ಪ್ರಯಾಣಿಕರ ಮೇಲೆ ನಿಗಾ ಇಟ್ಟು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮೆಟಲ್ ಡಿಟೆಕ್ಟರ್ ಹಾಗೂ ಚೆಕಿಂಗ್ ಮಷಿನ್ ಅಳವಡಿಕೆ ಮಾಡಲಾಗಿದೆ. ಆದರೆ ಈ ಮಷಿನ್ ಮಾತ್ರ ಹೆಸರಿಗೆ ಮಾತ್ರ ಎನ್ನುವಂತಾಗಿದೆ. ಹುಬ್ಬಳ್ಳಿ ರೈಲ್ವೆ ನಿಲ್ದಾಣಕ್ಕೆ ಯಾವುದೇ ವಸ್ತುಗಳನ್ನು ತೆಗೆದುಕೊಂಡು ಬಂದರೂ ಕೂಡ ಯಾವುದೇ ಭಯ ಇಲ್ಲದೆಯೇ ನಿರ್ಭಯವಾಗಿ ತೆಗೆದುಕೊಂಡು ಹೋಗಬಹುದಾಗಿದೆ. ಅಷ್ಟರಮಟ್ಟಿಗೆ ಅವ್ಯವಸ್ಥೆ ತಾಂಡವವಾಡುತ್ತಿದೆ.

ಮೊದಲು ಕೆಲವು ದಿನ ಪ್ರಯಾಣಿಕರ ಬ್ಯಾಗ್ ಹಾಗೂ ಲಗೇಜ್ ಗಳನ್ನು ತಪಾಸಣೆ ಮಾಡಲಾಗುತ್ತಿತ್ತು. ಆದರೆ ಈಗ ಆ ವ್ಯವಸ್ಥೆ ಇಲ್ಲವಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಮಷಿನ್ ಕೆಲಸವಿಲ್ಲದೇ ಇಟ್ಟಿರುವ ಜಾಗೆಯಲ್ಲಿ ನೆಟ್ಟಗೆ ನಿಂತಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿಯೇ ಇಂತಹ ಅವ್ಯವಸ್ಥೆ ತಲೆದೂರಿದ್ದರು ಅಧಿಕಾರಿಗಳು ಮಾತ್ರ ತಲೆ ಕೆಡೆಸಿಕೊಂಡಿಲ್ಲ. ಇನ್ನಾದರೂ ಎಚ್ಚೇತ್ತುಕೊಂಡು ಮುಂಬರುವ ದಿನಗಳಲ್ಲಿ ಸಂಭವಿಸಬಹುದಾದ ಘಟನೆಗಳಿಗೆ ಕಡಿವಾಣ ಹಾಕಬೇಕಿದೆ.

Edited By : Manjunath H D
Kshetra Samachara

Kshetra Samachara

09/12/2021 02:25 pm

Cinque Terre

38.31 K

Cinque Terre

1

ಸಂಬಂಧಿತ ಸುದ್ದಿ