ಹುಬ್ಬಳ್ಳಿ: ಹದಗೆಟ್ಟ ರಸ್ತೆಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದನ್ನು ನಾವು ನೀವು ಕೇಳಿದ್ದೇವೆ, ನೋಡಿದ್ದೇವೆ. ಆದರೆ ಇಂದು ಹುಬ್ಬಳ್ಳಿಯಲ್ಲಿ ನ್ಯಾಯವಾದಿಗಳು ರಸ್ತೆ ಸರಿಪಡಿಸುವಂತೆ ರಸ್ತೆಗಿಳಿದು ಪ್ರತಿಭಟನೆ ಮಾಡಿದ್ದಾರೆ.
ಯೆಸ್..ಹುಬ್ಬಳ್ಳಿಯ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಮಹಿಳಾ ವಿದ್ಯಾಪೀಠ ಸಿಗ್ನಲ್‌ನಿಂದ ತಿಮ್ಮಸಾಗರ ಬಸವೇಶ್ವರ ದೇವಸ್ಥಾನದ ರಸ್ತೆ ಮುಖಾಂತರ ಹೋಗಿ ಬರುವ ರಸ್ತೆ, ಸಂಪೂರ್ಣ ಹದಗೆಟ್ಟಿದೆ. ಇಲ್ಲಿ ನಿತ್ಯ ಸಂಚರಿಸುವ ವಾಹನ ಸವಾರರಿಗೆ ಮತ್ತು ವಕೀಲರು ಹಾಗೂ ನಾಗರಿಕರ ಸಂಚಾರಕ್ಕೆ ಇದು ಅಪಾಯಕಾರಿ ರಸ್ತೆಯಾಗಿದೆ. ಈ ಬಗ್ಗೆ ಅನೇಕ ಸಲ ಸಂಬಂಧಪಟ್ಟ ಇಲಾಖೆಗಳಿಗೆ ಲಿಖಿತ ಮನವಿ ಸಲ್ಲಿಸಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಜರುಗಿಸಿಲ್ಲ. ಅಧಿಕಾರಿಗಳ ಈ ನಿರ್ಲಕ್ಷ್ಯದ ವಿರುದ್ಧ ವಕೀಲರು ಹೊಸ ಕೋರ್ಟ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿ ಅಸಮಧಾನ ವ್ಯಕ್ತಪಡಿಸಿದ್ದಾರೆ.
Kshetra Samachara
21/02/2022 05:24 pm