ನವಲಗುಂದ: ಸಾರ್ವಜನಿಕರು ಸಂಚರಿಸುವ ರಸ್ತೆಯನ್ನು ಸ್ಥಳೀಯರು ಅತಿಕ್ರಮಣ ಮಾಡಿದ್ದಾರೆ ಎಂದು ಆಕ್ರೋಶಗೊಂಡ ಸಾರ್ವಜನಿಕರು ಸೋಮವಾರ ರಾತ್ರಿ ರಸ್ತೆಗಿಳಿದು, ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ನವಲಗುಂದ ಪಟ್ಟಣದ ಚಾವಡಿಯಿಂದ ಅಂಬೇಡ್ಕರ್ ನಗರಕ್ಕೆ ಹೋಗುವ ರಸ್ತೆಯಲ್ಲಿ ಚಕ್ಕಡಿ, ಟ್ರ್ಯಾಕ್ಟರ್ ಟ್ರೇಲರ್, ಕಲ್ಲು, ಮರಳು ಹಾಕಲಾಗಿದೆ. ಇದರಿಂದ ಸಾರ್ವಜನಿಕರಿಗೆ ದಿನನಿತ್ಯ ನುಂಗಲಾರದ ತುತ್ತಾಗಿದೆ. ಸಂಚರಿಸಲು ಸಹ ದಾರಿಯಿಲ್ಲದೇ ಪರದಾಡುವಂತಾಗಿದೆ ಎಂದು ಆಕ್ರೋಶಗೊಂಡ ಸಾರ್ವಜನಿಕರು ರಸ್ತೆಗಿಳಿದು ಪುರಸಭೆ ಅಧಿಕಾರಿಗಳ ವಿರುದ್ಧ ಹರಿಹಾಯ್ದಿದ್ದಾರೆ.
ಇನ್ನು ಈ ಬಗ್ಗೆ ಪುರಸಭೆ ಕಾರ್ಯಾಲಯಕ್ಕೆ ಸ್ಥಳೀಯರು ಮನವಿ ಸಲ್ಲಿಸಿದ್ದಾರಂತೆ. ಪುರಸಭೆ ವತಿಯಿಂದ ಸಹ ನೋಟೀಸ್ ನೀಡಲಾದರೂ ಸ್ಥಳೀಯರು ಎಚ್ಚೆತ್ತುಕೊಂಡಿಲ್ಲವಂತೆ. ಕೂಡಲೇ ಪುರಸಭೆ ಅಧಿಕಾರಿಗಳು ಸ್ಥಳೀಯರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು, ಅತಿಕ್ರಮಣ ತೆರವುಗೊಳಿಸಿ ಸಂಚಾರಕ್ಕೆ ಅಡಚಣೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
Kshetra Samachara
22/03/2022 08:51 am