ಹುಬ್ಬಳ್ಳಿ: ಅದು ಉತ್ತರ ಕರ್ನಾಟಕ ಭಾಗದ ಮಹತ್ವದ ಯೋಜನೆ. ಈ ಯೋಜನೆಗಾಗಿ ಕಳೆದ ನಾಲ್ಕು ದಶಕಗಳಿಂದ ನಿರಂತರ ಹೋರಾಟ ನಡೆಯುತ್ತಿದೆ. ಈ ಯೋಜನೆಯ ನ್ಯಾಯಾಧೀಕರಣ ತೀರ್ಪು ಬಂದಿದ್ದರೂ ಈಗ ಮತ್ತೊಮ್ಮೆ ಹೋರಾಟದ ಸ್ವರೂಪ ಪಡೆದುಕೊಳ್ಳಲಿದೆ. ಅಷ್ಟಕ್ಕೂ ಏನಿದು ಹೋರಾಟ...? ಮಹತ್ವದ ಯೋಜನೆ ಆದರೂ ಏನು ಅಂತೀರಾ ಈ ಸ್ಟೋರಿ ನೋಡಿ..
ಮಹದಾಯಿ ಹಾಗೂ ಕಳಸಾ ಬಂಡೂರಿ ಹೋರಾಟ ಕಳೆದ ನಾಲ್ಕು ದಶಕಗಳಿಂದ ನಡೆಯುತ್ತಿದ್ದರೂ ಒಂದಿಲ್ಲೊಂದು ರೀತಿಯಲ್ಲಿ ತೊಡಕುಗಳು ಎದುರಾಗುತ್ತಲೇ ಇದೆ. ಹೌದು.. ಮಹದಾಯಿ ಕಾಮಗಾರಿಯ ಲೋಪದೋಷದ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಮೂಲ ಸ್ವರೂಪವನ್ನೇ ಬದಲಾವಣೆ ಮಾಡುತ್ತಿದೆಯಾ ರಾಜ್ಯ ಸರ್ಕಾರ ಎಂಬುವಂತ ಆರೋಪವೊಂದು ಕೇಳಿ ಬಂದಿದೆ. ಕಳಸಾ ಬಂಡೂರಿ ನಾಲಾ ಯೋಜನೆಯ ಕಾಮಗಾರಿ ವಿಚಾರದಲ್ಲಿ ಸ್ವರೂಪ ಬದಲಾವಣೆ ಮಾಡಲಾಗಿದೆ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾಮಗಾರಿಯ ಮೂಲ ಸ್ವರೂಪವನ್ನೇ ಬದಲಾವಣೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಸ್ವತಃ ಮಾಜಿ ಶಾಸಕರಿಂದಲೇ ಗಂಭೀರ ಆರೋಪ ಕೇಳಿ ಬಂದಿದೆ.
ಇನ್ನೂ 28 ಮೀಟರ್ ಎತ್ತರದ ಆಣೆಕಟ್ಟಿನ ಬದಲಾಗಿ 11 ಅಡಿ ಆಣೆಕಟ್ಟು ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಮೂಲ ಸ್ವರೂಪದಲ್ಲಿ 28 ಮೀ ಆಣೆಕಟ್ಟು ನಿರ್ಮಾಣದ ಕುರಿತು ಇರುವ ಅಂಶದಲ್ಲಿ ಬದಲಾವಣೆಯಾಗಿದ್ದು, ಹೊಸ ಡಿಪಿಆರ್ ಮೂಲಕ ಮೂಲ ಸ್ವರೂಪವನ್ನೇ ಬದಲಾಯಿಸಿರೋ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಮಹದಾಯಿ ವಿಚಾರದಲ್ಲಿ ಧ್ವಂದ್ವ ನೀತಿ ಅನುಸರಿಸುತ್ತಿದೆಯಾ ರಾಜ್ಯ ಸರ್ಕಾರ ಎಂಬುವಂತ ಅನುಮಾನ ಒಂದು ಕಡೆಯಾದರೇ ಮತ್ತೊಂದು ಕಡೆಯಲ್ಲಿ ಮಹಾರಾಷ್ಟ್ರ ಹಾಗೂ ಗೋವಾ ಸರ್ಕಾರದ ಒತ್ತಡಕ್ಕೆ ಮಣೆಯಿತಾ ಬೊಮ್ಮಾಯಿ ಸರ್ಕಾರ ಎಂಬುವಂತ ಮಾತು ಕೇಳಿ ಬರುತ್ತಿದೆ.
ಒಟ್ಟಿನಲ್ಲಿ ಮಾಜಿ ಶಾಸಕ ಎನ್.ಎಚ್.ಕೋನರಡ್ಡಿಯಿಂದ ಸರ್ಕಾರದ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು, ಸಾಧಕ ಬಾಧಕಗಳನ್ನ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಈ ಬದಲಾವಣೆಯ ಬಗ್ಗೆ ಯಾವುದೇ ಚರ್ಚೆ ನಡೆಸದೇ ಸ್ವರೂಪ ಬದಲಾವಣೆ ಮಾಡ್ತಿದಾರೆಂದು ಆರೋಪಿಸಿದ್ದು, ಈ ಬಗ್ಗೆ ಸರ್ಕಾರವೇ ಉತ್ತರ ನೀಡುವ ಕಾರ್ಯವನ್ನು ಮಾಡಬೇಕಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
07/10/2022 10:05 am