ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಪಟ್ಟಣದಲ್ಲಿ ಗಂಜಿ ಕೇಂದ್ರ ಆರಂಭ

ಅಣ್ಣಿಗೇರಿ: ಪಟ್ಟಣದಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮಸ್ಥರು ತತ್ತರಿಸಿ ಹೋಗಿದ್ದಾರೆ.ಇನ್ನೂ ಪಟ್ಟಣದ ತಗ್ಗು ಪ್ರದೇಶಗಳಲ್ಲಿ ಇದ್ದ ಮನೆಗಳಿಗೆ, ದೇವಸ್ಥಾನಗಳಲ್ಲಿ ಹಾಗೂ ಅನೇಕ ಜಾಗಗಳಲ್ಲಿ ಅಪಾರ ಪ್ರಮಾಣದ ನೀರು ನುಗ್ಗಿ ಅಪಾರ ಪ್ರಮಾಣದ ನಷ್ಟ ಆಗಿದೆ.

ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾಧಿಕಾರಿಯವರು ಅಣ್ಣಿಗೇರಿ ಮತ್ತು ನವಲಗುಂದ ತಾಲೂಕು ಶಾಲೆಗಳಿಗೆ ರಜೆ ಘೋಷಿಸಿ ಆದೇಶ ನೀಡಿ ಪಟ್ಟಣಕ್ಕೆ ಆಗಮಿಸಿ ನೀರು ನುಗ್ಗಿದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಅಪಾರ ಪ್ರಮಾಣದ ಮಳೆಯಾಗಿದ್ದರಿಂದ ಜನಸಾಮಾನ ತೊಂದರೆ ಆಗಿದೆ.

ಆದಕಾರಣ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ನಿಮ್ಮ ಜೊತೆ ಇರುತ್ತದೆ ಹಾಗೂ ಗಂಜಿ ಕೇಂದ್ರವನ್ನು ಆರಂಭಿಸಲಾಗುತ್ತದೆ ಎಂದು ತಿಳಿಸಿದರು.

Edited By : Manjunath H D
Kshetra Samachara

Kshetra Samachara

06/09/2022 04:40 pm

Cinque Terre

20.42 K

Cinque Terre

1

ಸಂಬಂಧಿತ ಸುದ್ದಿ