ಧಾರವಾಡ: ನಿನ್ನೆ ರಾತ್ರಿ ಧಾರವಾಡ ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ಅನೇಕ ಮನೆಗಳಿಗೆ ಹಾನಿಯಾಗಿದೆ.
ಧಾರವಾಡ ತಾಲೂಕಿನ ಮಾರಡಗಿ ಗ್ರಾಮದ ಉಮರಸಾಬ್ ಮುಲ್ಲಾ ಎಂಬುವವರ ಮನೆ ಮಳೆ, ಗಾಳಿಗೆ ಸಂಪೂರ್ಣ ಹಾಳಾಗಿದೆ. ದೊಡ್ಡ ಪ್ರಮಾಣದಲ್ಲಿ ಗಾಳಿ ಬೀಸಿದ್ದರಿಂದ ಮನೆಯ ಮೇಲ್ಛಾವಣಿ ಕಿತ್ತು ಹೋಗಿದೆ. ತಗಡುಗಳು ಕಿತ್ತುಕೊಂಡು ಹೋಗಿವೆ.
ಇನ್ನು ಹೆಂಚುಗಳು ಚೆಲ್ಲಾಪಿಲ್ಲಿಯಾಗಿವೆ. ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ಉಮರಸಾಬ್ ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ಇವರಷ್ಟೇ ಅಲ್ಲದೇ ಜಿಲ್ಲೆಯ ಅನೇಕ ಕಡೆಗಳಲ್ಲೂ ಸಾಕಷ್ಟು ಮನೆಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ.
Kshetra Samachara
18/04/2022 12:08 pm