ಧಾರವಾಡ: ಶುಕ್ರವಾರ ಧಾರವಾಡ ಜಿಲ್ಲೆಯಾದ್ಯಂತ ಸುರಿದ ಅಕಾಲಿಕ ಮಳೆಯಿಂದಾಗಿ ಜನ, ಜೀವನ ಅಸ್ತವ್ಯಸ್ಥಗೊಂಡಿದೆ.
ಶುಕ್ರವಾರ ಮಧ್ಯಾಹ್ನ ಸುರಿದ ಮಳೆಯಿಂದಾಗಿ ಧಾರವಾಡ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದವು. ನಗರದ ಟೋಲನಾಕಾ ವೃತ್ತ ಜಲಾವೃತಗೊಂಡು ವಾಹನ ಸಂಚಾರಕ್ಕೆ ಅಡಚಣೆ ಉಂಟು ಮಾಡಿತು.
ಇನ್ನು ಜನ್ನತನಗರದ ಶಿವಾನಂದ ಕಾಲೊನಿಯಲ್ಲಿ ಮಳೆಯ ನೀರಿನ ರಭಸಕ್ಕೆ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಗಳು ಕೊಚ್ಚಿಕೊಂಡು ಹೋಗಿವೆ. ಹೀಗೆ ವಾಹನಗಳು ನೀರಿನ ರಭಸಕ್ಕೆ ಸಿಕ್ಕು ಕೊಚ್ಚಿಕೊಂಡು ಹೋಗುವ ದೃಶ್ಯವನ್ನು ಅಲ್ಲಿನ ನಿವಾಸಿಗಳು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.
Kshetra Samachara
08/01/2021 07:23 pm