ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ತೀವ್ರ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಜಿಲ್ಲಾ ಉಪವಿಭಾಗಾಧಿಕಾರಿ ಡಾ. ಗೋಪಾಲಕೃಷ್ಣ.ಬಿ ಭೇಟಿ

ಅಣ್ಣಿಗೇರಿ: ಪಟ್ಟಣದಲ್ಲಿ ಸೋಮವಾರ ಸಾಯಂಕಾಲ ಸುರಿದ ಧಾರಾಕಾರ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಜಿಲ್ಲಾ

ಉಪವಿಭಾಗಾಧಿಕಾರಿ ಡಾ. ಗೋಪಾಲಕೃಷ್ಣ.ಬಿ ಗುರುವಾರ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಪವಿಭಾಗಾಧಿಕಾರಿ, ತೀವ್ರವಾಗಿ ಸುರಿದ ಮಳೆಯಿಂದ ಎಷ್ಟು ಮನೆಗಳು ಕುಸಿದಿವೆ ಮತ್ತು ಎಷ್ಟು ಮನೆಯೊಳಗೆ ಮಳೆ ನೀರು ನುಗ್ಗಿ ಹಾನಿಯನ್ನುಂಟು ಮಾಡಿದೆ ಎಂಬ ಸಮೀಕ್ಷೆಯನ್ನು ಜಿಲ್ಲಾಡಾಳಿತಕ್ಕೆ ತಕ್ಷಣವೇ ನೀಡಬೇಕು ಎಂದು ಸ್ಥಳೀಯ ಆಡಳಿತಕ್ಕೆ ಸೂಚಿಸಿದರು.

ಮಾನ್ಯ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಅವರು ಈಗಾಗಲೇ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಅವರ ಸೂಚನೆ ಮೇರೆಗೆ ಆದಷ್ಟು ಬೇಗನೆ ಸರ್ಕಾರದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ನೀಡಲು ನೊಂದ ಕುಟುಂಬಸ್ಥರಿಗೆ ಭರವಸೆ ನೀಡಿದರು.

ಮಳೆ ನೀರು ಮನೆಯೊಳಗೆ ನುಗ್ಗಿದ ಕುಟುಂಬಗಳಿಗೆ ಪ್ರತಿ ಕುಟುಂಬಕ್ಕೆ ರೂ.10 ಸಾವಿರ ಪರಿಹಾರ ಧನ ನೀಡಲಾಗುವುದು ಎಂದು ಈ ಸಂದರ್ಭದಲ್ಲಿ ಜಿಲ್ಲಾ ಉಪವಿಭಾಗಾಧಿಕಾರಿ ಡಾ. ಗೋಪಾಲಕೃಷ್ಣ.ಬಿ ಹೇಳಿದರು.

ಪಟ್ಟಣದ ಶ್ರೀ ಹಳೇ ಅಮೃತೇಶ್ವರ ನಗರ , ಹಳ್ಳಿಕೇರಿ ರಸ್ತೆಗೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಸ್ಥಳೀಯ ನ್ಯಾಯಬೆಲೆ ಅಂಗಡಿಗೆ ಮಳೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ಹಾನಿಯಾದ ಅಕ್ಕಿ ಚೀಲವನ್ನು ಕೂಡಾ ಪರಿಶೀಲನೆ ಮಾಡಿದರು.ಈ ಸಂದರ್ಭದಲ್ಲಿ ತಹಶೀಲ್ದಾರ ಮಂಜುನಾಥ ಅಮಾಸಿ, ಮುಖ್ಯಾಧಿಕಾರಿ ಕೆ.ಎಫ್‌.ಕಟಗಿ ಇತರರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

14/10/2021 07:03 pm

Cinque Terre

30.17 K

Cinque Terre

1

ಸಂಬಂಧಿತ ಸುದ್ದಿ