ಹುಬ್ಬಳ್ಳಿ: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ವಾಣಿಜ್ಯನಗರಿ ಹುಬ್ಬಳ್ಳಿಯ ಬಹುತೇಕ ಕಡೆಯಲ್ಲಿ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆ ಎದುರಾಗಿದೆ. ಅಲ್ಲದೇ ಬಿಡದೇ ಸುರಿಯುತ್ತಿರುವ ಮಳೆಯಿಂದ ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿರುವ ಕೆಳ ಸೇತುವೆ ಕೂಡ ಜಲಾವೃತಗೊಂಡಿದೆ.
ಸತತವಾಗಿ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜನ ಜೀವನ ಅಕ್ಷರಶಃ ತತ್ತರಿಸಿ ಹೋಗಿದೆ. ಬಿಡದೇ ಸುರಿಯುತ್ತಿರುವ ಮಳೆಯಿಂದ ಎಲ್ಲೆಡೆಯೂ ನೀರು ನಿಂತಿದ್ದು, ಜನರು ನೀರಿನಲ್ಲಿಯೇ ಓಡಾಡುವಂತಾಗಿದೆ.
ಇನ್ನೂ ರೈಲ್ವೆ ಕೆಳ ಸೇತುವೆಯಲ್ಲಿ ನೀರು ನಿಂತಿರುವ ಪರಿಣಾಮ ಪ್ರಯಾಣಿಕರು ಒಂದು ಪ್ಲಾಟ್ ಫಾರಂ ನಿಂದ ಮತ್ತೊಂದು ಪ್ಲಾಟ್ ಫಾರಂಗೆ ಹೋಗಲು ಪರದಾಡುವಂತಾಗಿದೆ.
Kshetra Samachara
20/05/2022 04:16 pm