ಕಲಘಟಗಿ: ಧಾರವಾಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಜಿಟಿ ಜಿಟಿ ಮಳೆಗೆ ಹಲವೆಡೆ ಮನೆಗಳು ನೆಲಕಚ್ಚಿವೆ. ತಡರಾತ್ರಿ ಸುರಿದ ಮಳೆಗೆ ಮನೆ ಕುಸಿತಗೊಂಡ ಬೆನ್ನಲ್ಲೇ ಮಹಿಳೆಯೊಬ್ಬಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹೌದು..ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮುಕ್ಕಲ್ ಗ್ರಾಮದಲ್ಲಿ ಮಳೆಗೆ ಮನೆ ಕುಸಿತವಾಗಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ತಲೆಗೆ ತೀವ್ರ ಗಾಯವಾಗಿದೆ.
ಮನೆ ಕುಸಿತಗೊಂಡಾಗ ಮನೆಯಲ್ಲಿಯೇ ಮಲಗಿದ್ದ ಮಹಿಳೆ ಗಾಯಗೊಂಡಿದ್ದಾಳೆ. ತಡರಾತ್ರಿ ಮನೆ ಬಿದ್ದರೂ ಭೇಟಿ ನೀಡದ ಅಧಿಕಾರಿಗಳ ನಡೆಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಇಲ್ಲಿಯವರೆಗೂ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳದ ಜನಪ್ರತಿನಿಧಿಗಳು ಕೂಡ ತಮ್ಮ ಬೇಜವಾಬ್ದಾರಿತನ ತೋರುತ್ತಿದ್ದಾರೆ.
Kshetra Samachara
16/07/2022 11:45 am