ಹುಬ್ಬಳ್ಳಿ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಅದೇ ರೀತಿ ಹಲವು ಮನೆಗಳ ಗೋಡೆಗಳು ಬಿದ್ದಿವೆ.
ಹುಬ್ಬಳ್ಳಿಯಲ್ಲಿ ಸತತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ, ನಗರದ ಘಂಟಿಕೇರಿ ಓಣಿಯಲ್ಲಿ ಬನಶಂಕರಿ ಹೆಬ್ಬಳ್ಳಿ ಅವರ ಮನೆಗೆ ಹಾನಿಯಾಗಿದ್ದು, ಸುದ್ದಿ ತಿಳಿಯುತ್ತಿದ್ದಂತೆ ತಕ್ಷಣವೆ ಶಾಸಕ ಪ್ರಸಾದ ಅಬ್ಬಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕೂಡಲೆ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ತುರ್ತು ಪರಿಹಾರಕ್ಕೆ ಕ್ರಮಕೈಗೊಳ್ಳಲು ತಿಳಿಸಿದರು.
Kshetra Samachara
16/07/2022 01:17 pm