ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆ ವತಿಯಿಂದ ಪ್ರತಿಭಟನೆ

ಕುಂದಗೋಳ : ಎಲ್.ಕೆ.ಜಿ ಹಾಗೂ ಯು.ಕೆ.ಜಿ ತರಗತಿಗಳನ್ನು ಅಂಗನವಾಡಿಯಲ್ಲಿಯೇ ಪ್ರಾರಂಭಿಸಬೇಕು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆ ವತಿಯಿಂದ ತಹಶೀಲ್ದಾರ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಗ್ರೇಡ-2 ತಹಶೀಲ್ದಾರ ವಿ.ವಾಯ್.ಮುಳಗುಂದಮಠ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕ ನೀಡಿ ಅಂಗನವಾಡಿ ಕೇಂದ್ರದಲ್ಲೇ ಎಲ್.ಕೆ.ಜಿ ಮತ್ತು ಯು.ಕೆ.ಜಿ ಪ್ರಾರಂಭಿಸುವಂತೆ ಘೋಷನೆ ಕೂಗಿ ಪ್ರತಿಭಟನೆ ನಿರತ ಅಂಗನವಾಡಿ ಕಾರ್ಯಕರ್ತೆಯರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಯೋಜನಾಧಿಕಾರಿಗಳ ಕಾರ್ಯಾಲಯಕ್ಕೆ ತೆರಳಿ ಸಿಡಿಪಿಓ ಅನ್ನಪೂರ್ಣ ಸಂಗಳದ ಅವರಿಗೂ ಮನವಿ ಸಲ್ಲಿಸಿದರು.

Edited By : Nagesh Gaonkar
Kshetra Samachara

Kshetra Samachara

21/09/2020 01:10 pm

Cinque Terre

16.69 K

Cinque Terre

0

ಸಂಬಂಧಿತ ಸುದ್ದಿ