ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮೂಲ ಸೌಲಭ್ಯಗಳಿಂದ ವಂಚಿತವಾದ ಬೂದನಗುಡ್ಡ

ಹುಬ್ಬಳ್ಳಿ: ಮಲೆನಾಡಿನ ಸೆರಗಿನಲ್ಲಿ ಬೆಟ್ಟ ಗುಡ್ಡಗಳ ಮಧ್ಯೆ ರಮಣೀಯವಾಗಿ ಕಂಡು ಬರುವ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸುಕ್ಷೇತ್ರ ಬೂದನಗುಡ್ಡದ ಶ್ರೀ ಚನ್ನಬಸವಣ್ಣನ ದೇವಸ್ಥಾನಕ್ಕೆ ನಿತ್ಯ ನೂರಾರು ಭಕ್ತರು ಆಗಮಿಸುತ್ತಾರೆ. ಆದರೆ ಇಲ್ಲಿ ನೀರಿನ ಸಮಸ್ಯೆ ಸೇರಿದಂತೆ ಮೂಲ ಸೌಲಭ್ಯಗಳಿಲ್ಲದೆ ಭಕ್ತಾದಿಗಳು ಬಳಲುವಂತಾಗಿದೆ.

ಹೌದು. ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ತಾಣವಾದ ಬೂದನಗುಡ್ಡ ಪ್ರವಾಸಿ ತಾಣ. ಅಷ್ಟೇ ಅಲ್ಲದೇ, ಇಷ್ಟಾರ್ಥ ಬೇಡಿಕೆಗಳನ್ನು ಈಡೇರಿಸುವ ಶ್ರೀ ಚೆನ್ನಬಸವಣ್ಣನ ದೇವಸ್ಥಾನಕ್ಕೆ ಶ್ರಾವಣ ಮಾಸದಂದು ಜಾತ್ರಾಮಹೋತ್ಸವದ ಅಂಗವಾಗಿ ಧಾರವಾಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ. ಇಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. ‌ಆದರೆ ಈ ದೇವಸ್ಥಾನಕ್ಕೆ ಹಲವು ಸಮಸ್ಯೆಗಳಿಂದ ಕೂಡಿದ್ದು, ಸಂಬಂಧಿಸಿದ ಅಧಿಕಾರಿಗಳು ಸಮಸ್ಯೆಗಳನ್ನು ಬಗೆಹರಿಸದೆ ನಿಷ್ಕಾಳಜಿ ವಹಿಸುತ್ತಿದ್ದಾರೆ ಎಂದು ಭಕ್ತರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ದೇವಸ್ಥಾನದ ಟ್ರಸ್ಟ್ ಸಹ ಇದ್ದು, ಅಲ್ಪ ಸ್ವಲ್ಪ ಕಾರ್ಯ ಮಾಡಿದರೂ ಸಹ ಯಾವುದೇ ಪ್ರಯೋಜನವಾಗುತ್ತಿಲ್ಲ. ಈ ಟ್ರಸ್ಟ್ ಹತ್ತು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿ, ಹೆಚ್ಚಿನ ಅಭಿವೃದ್ಧಿಗೆ ಬೇಡಿಕೆ ಇಟ್ಟಿದೆ. ಈ ಕುರಿತಾಗಿ ರಾಜ್ಯ ಸರ್ಕಾರ ವಿಶೇಷ ಗಮನ ಹರಸಿ ದೇವಸ್ಥಾನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ ಆದ್ಯತೆ ನೀಡಬೇಕಿದೆ ಎಂಬುದು ದೇವಸ್ಥಾನದ ಟ್ರಸ್ಟ್ ಹಾಗೂ ಭಕ್ತಾದಿಗಳ ಆಗ್ರಹವಾಗಿದೆ.

Edited By :
Kshetra Samachara

Kshetra Samachara

29/03/2022 02:49 pm

Cinque Terre

18.85 K

Cinque Terre

2

ಸಂಬಂಧಿತ ಸುದ್ದಿ