ಧಾರವಾಡ: ಪರಿಶಿಷ್ಟ ಜಾತಿ ಹಾಗೂ ಪಂಗಡದ ವರ್ಗಕ್ಕೆ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಪರಿಶಿಷ್ಟ ಜಾತಿ ಹಾಗೂ ಪಂಗಡ ವರ್ಗದ ನೂರಾರು ಜನ ಧಾರವಾಡದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಧಾರವಾಡದ ಕಡಪಾ ಮೈದಾನದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಎಸ್‌ಟಿ ಸಮುದಾಯಕ್ಕೆ ಶೇ.3 ರಿಂದ 7.5 ರಷ್ಟು ಮೀಸಲಾತಿ ನೀಡಬೇಕು ಹಾಗೂ ಎಸ್‌ಸಿ ಸಮುದಾಯಕ್ಕೆ ಶೇ.15 ರಿಂದ 17 ರಷ್ಟು ಮೀಸಲಾತಿ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿ, ಜಿಲ್ಲಾಧಿಕಾರಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
Kshetra Samachara
11/07/2022 02:48 pm