ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕೆಲವು ಕಡೆ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದ ಗ್ರಾಮೀಣ ಭಾಗದ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಗ್ರಾಮೀಣ ಭಾಗದ ಜನರು ಸಚಿವರ ವಿರುದ್ಧ ವಿನೂತನ ರೀತಿಯಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.
ಮಳೆಯಿಂದ ಗ್ರಾಮೀಣ ಭಾಗದ ರಸ್ತೆಗಳು ಕೆಸರು ಗದ್ದೆಯಂತಾಗಿದ್ದು, ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಕ್ಷೇತ್ರದಲ್ಲಿ ಸಂಪೂರ್ಣವಾಗಿ ಹಾಳಾಗಿವೆ. ರಸ್ತೆಗಳ ಪರಿಸ್ಥಿತಿಯಂತೂ ಹೇಳ ತೀರದಾಗಿದೆ. ಇದರಿಂದಾಗಿಯೇ ರೋಡ್‌ಗಳ ಮೇಲೆ ಮುಳ್ಳುಗಳನ್ನು ಇಟ್ಟು ರಸ್ತೆ ಬಂದ್ ಮಾಡಿದ ಗ್ರಾಮಸ್ಥರು ಸಚಿವರ ಹಾಗೂ ಸ್ಥಳೀಯ ಆಡಳಿತದ ವಿರುದ್ಧ ಅಸಮಾಧಾನ ಹೊರಹಾಕಿದರು.
ರಸ್ತೆಗಳ ಅಭಿವೃದ್ಧಿ ಮಾಡುವಂತೆ ಸಂಬಂಧಿಸಿದವರೆಲ್ಲರ ಗಮನಕ್ಕೆ ತಂದ ಹುಬ್ಬಳ್ಳಿ ತಾಲೂಕಿನ ಕೆರೆಸೂರ ಗ್ರಾಮಸ್ಥರು ಯಾರೂ ತಲೆ ಕೆಡಿಸಿಕೊಳ್ಳದ ಹಿನ್ನೆಲೆಯಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಡೆಗೆ ಬೇಸತ್ತು ರಸ್ತೆಗಳ ಮೇಲೆ ಮುಳ್ಳಿಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಗಳನ್ನು ಅಭಿವೃದ್ಧಿ ಮಾಡುವವರೆಗೂ ಮುಳ್ಳು ತೆರವುಗೊಳಿಸಿದಂತೆ ಗ್ರಾಮಸ್ಥರ ನಿರ್ಧಾರ ಮಾಡಿದ್ದಾರೆ.
Kshetra Samachara
05/08/2022 02:00 pm