ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಹುತೇಕ ರಸ್ತೆಗಳು ಗುಂಡಿ ಬಿದ್ದಿದ್ದು,ಕೂಡಲೇ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಶಿವಸೇನಾ ವತಿಯಿಂದ ಹು-ಧಾ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾಗಿದ್ದರೂ ಕೂಡ ಹು-ಧಾ ಮಹಾನಗರ ಮಾತ್ರ ಯಾವುದೇ ಕಾರಣಕ್ಕೂ ತೊಂದರೆಗಳಿಂದ ಮುಕ್ತವಾಗುತ್ತಿಲ್ಲ.ಅಲ್ಲದೇ ಸುಮಾರು ವರ್ಷಗಳಿಂದ ಚರಂಡಿ ಹಾಗೂ ರಸ್ತೆ ಸಮಸ್ಯೆಗಳಿಂದ ಜನರು ಸಂಕಷ್ಟ ಅನುಭವಿಸುವಂತಾಗಿದ್ದು,ಹತ್ತು ದಿನಗಳ ಒಳಗಾಗಿ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಇಲ್ಲವಾದರೇ ಪಾಲಿಕೆಗೆ ಮುತ್ತಿಗೆ ಹಾಕಲಾಗವುದು ಎಂದು ಶಿವಸೇನಾ ಕಾರ್ಯಕರ್ತರು ಎಚ್ಚರಿಕೆ ನೀಡಿದರು.
Kshetra Samachara
18/09/2020 12:53 pm