ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : 85 ಲಕ್ಷ ವೆಚ್ಚದಲ್ಲಿ ಜಲ ಜೀವನ್ ಮಿಷನ್ ಯೋಜನೆಗೆ ಚಾಲನೆ

ನವಲಗುಂದ : ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರ ನೇತೃತ್ವದಲ್ಲಿ ನವಲಗುಂದ ತಾಲೂಕಿನ ಸೊಟಕನಾಳ ಗ್ರಾಮದಲ್ಲಿ ಸುಮಾರು 85 ಲಕ್ಷ ವೆಚ್ಚದಲ್ಲಿ ಜಲ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಕೈಗೊಳ್ಳಲಾಗುತ್ತಿರುವ ಕುಡಿಯುವ ನೀರಿನ ಪೈಪಲೈನ್ ಅಳವಡಿಸುವುದು ಮತ್ತು ಮನೆಗಳಿಗೆ ನಳಗಳ ಜೋಡಣೆ ಕಲ್ಪಿಸುವ ಕಾಮಗಾರಿಗೆ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು.

ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳನ್ನು ಸಹ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಘಟಕದ ಅಧ್ಯಕ್ಷರಾದ ಎಸ್.ಬಿ.ದಾನಪ್ಪಗೌಡರ್, ಬಿಜೆಪಿ ಮುಖಂಡರಾದ ಸಿದ್ದಣ್ಣ ಕಟಗೇರಿ ಸೇರಿದಂತೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ರುಕ್ಕಿಯಾ ಬೆಗಂ ಕಮಲಶಾನವರ, ಉಪಾಧ್ಯಕ್ಷರು ನಾಗರಾಜ ತಳ್ವಾರ್, ಸದಸ್ಯರಾದ ಚನ್ನಪ್ಪಗೌಡ ಹಿರೇಗೌಡರ್, ವಿ ಆರ್ ಹಿರೇಮಠ್, ವೀರಣ್ಣಗೌಡ ಏಳುಕೋಟಿ ಮತ್ತು ಅಧಿಕಾರಿಗಳು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

13/04/2022 12:47 pm

Cinque Terre

7.08 K

Cinque Terre

0

ಸಂಬಂಧಿತ ಸುದ್ದಿ