ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಧರೆಗುರುಳಿದ ಕಂಬಗಳು- ವಿದ್ಯುತ್ ಇಲ್ಲದೇ ಪರದಾಡಿದ ಜನ

ಧಾರವಾಡ: ವಿದ್ಯುತ್ ತಂತಿಯ ಮೇಲೆ ಬೃಹತ್ ಮರದ ರೆಂಬೆಯೊಂದು ಬಿದ್ದ ಪರಿಣಾಮ ಸಾಲು ಸಾಲು ವಿದ್ಯುತ್ ಕಂಬಗಳು ಧರೆಗೆ ಉರುಳಿದ ಘಟನೆ ನಗರದ ನಾರಾಯಣಪುರ ಬಡಾವಣೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

ವಿದ್ಯುತ್ ಕಂಬಗಳು ಧರೆಗೆ ಉರುಳಿದ ಪರಿಣಾಮ ಧಾರವಾಡ ನಗರದ ವಿವಿಧ ಬಡಾವಣೆಯಲ್ಲಿ ವಿದ್ಯುತ್ ಇಲ್ಲದೇ ಕತ್ತಲೆ ಆವರಿಸಿತ್ತು. ಘಟನಾ ಸ್ಥಳಕ್ಕೆ ಧಾರವಾಡ ಸಂಚಾರ ಠಾಣೆ ಪೊಲೀಸರು, ಹೆಸ್ಕಾಂ ಸಿಬ್ಬಂದಿ ಹಾಗೂ ಪಾಲಿಕೆ ಸಿಬ್ಬಂದಿ ಆಗಮಿಸಿ ವಿದ್ಯುತ್ ಕಂಬಗಳನ್ನು ಮೇಲೆತ್ತುವ ಕೆಲಸ ಮಾಡಿದ್ದಾರೆ. ಸುಮಾರು ಹತ್ತು ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿದ್ದವು. ಇದರಿಂದ ಧಾರವಾಡದ ವಿವಿಧ ಬಡಾವಣೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.

Edited By : Vijay Kumar
Kshetra Samachara

Kshetra Samachara

24/02/2021 10:12 am

Cinque Terre

26.6 K

Cinque Terre

2

ಸಂಬಂಧಿತ ಸುದ್ದಿ