ಅಣ್ಣಿಗೇರಿ: ರಾಜ್ಯಾದ್ಯಂತ ಜನತಾ ಜಲಧಾರೆ ರಥಯಾತ್ರೆ ಆರಂಭಗೊಂಡಿದ್ದು, ಸಮಗ್ರ ನೀರಾವರಿ ಯೋಜನೆಗಳ ಅನುಷ್ಠಾನ ಗೊಳಿಸುವಲ್ಲಿ ಈ ಕಾರ್ಯ ಕೈಗೊಂಡಿದ್ದು, ಇಂದು ತಾಲೂಕಿನ ಬದ್ರಾಪುರ ಗ್ರಾಮದಲ್ಲಿ ಜಲಧಾರೆ ಯಾತ್ರೆ ಮುಗಿಸಿಕೊಂಡು ನಂತರ ಅಣ್ಣಿಗೇರಿ ಪಟ್ಟಣಕ್ಕೆ ಆಗಮಿಸಿತು.
ಪಟ್ಟಣದಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಅಂಗಡಿ ಅವರ ನೇತೃತ್ವದಲ್ಲಿ ಕಾರ್ಯಕರ್ತರು ಜನತಾ ಜಲಧಾರೆ ಯನ್ನು ಅದ್ದೂರಿಯಾಗಿ ಬರಮಾಡಿಕೊಂಡರು. ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಾದ್ಯಗಳೊಂದಿಗೆ ಹಾಗೂ ಕುಂಭಮೇಳ ದೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿತು.
ನಂತರ ಅಲ್ಲಿಂದ ವಿವೇಕಾನಂದ ಸರ್ಕಲ್ ನಲ್ಲಿ ಜೆಡಿಎಸ್ ಪಕ್ಷದ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ಧಾರವಾಡ ಜಿಲ್ಲಾ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಅಂಗಡಿ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು ಸುಮಾರು ಹತ್ತು ಹನ್ನೆರಡು ವರ್ಷಗಳಿಂದ ಕೆರೆ ನಿರ್ಮಾಣ ಮಾಡುತ್ತಿದ್ದಾರೆ. ಅದು ಇಂದಿಗೂ ಮುಗಿಯುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಗುಡುಗಿದರು.
ಈ ವೇಳೆ ಜಿಲ್ಲಾಧ್ಯಕ್ಷ ಬಿಬಿ ಗಂಗಾಧರಮಠ, ಹುಣಸಿಮರದ,ಶಲವಡಿ, ತೋಟದ,ಶ್ರೀಶೈಲ್ ಮೂಲಿಮನಿ, ಶಿವಶಂಕರ್ ಕಲ್ಲೂರ್ ಸೇರಿದಂತೆ ಅನೇಕ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ನಂದೀಶ್ ಪಬ್ಲಿಕ್ ನೆಕ್ಸ್ಟ್ ಅಣ್ಣಿಗೇರಿ
Kshetra Samachara
03/05/2022 11:12 am