ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪಬ್ಲಿಕ್ ನೆಕ್ಸ್ಟ್ ಬಿಗ್ ಇಂಪ್ಯಾಕ್ಟ್: ತಕ್ಷಣವೇ ದೊರೆಯಿತು ಸಮಸ್ಯೆಗೆ ಪರಿಹಾರ

ಹುಬ್ಬಳ್ಳಿ: ಹೆಸ್ಕಾಂ ನಿಷ್ಕಾಳಜಿ ಕುರಿತು ಪಬ್ಲಿಕ್ ನೆಕ್ಸ್ಟ್ ಮಾಡಿದ ವರದಿಗೆ ಎಚ್ಚೆತ್ತುಕೊಂಡ ಅಧಿಕಾರಿಗಳು ಏಕಾಏಕಿ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹಾರ ಕಲ್ಪಿಸಿದ್ದಾರೆ. ಇದು ನಿಮ್ಮ ಪಬ್ಲಿಕ್ ನೆಕ್ಸ್ಟ್ ಮಾಧ್ಯಮದ ಬಿಗ್ ಇಂಪ್ಯಾಕ್ಟ್ ಆಗಿದೆ.

ನಿನ್ನೆಯಷ್ಟೇ ಹುಬ್ಬಳ್ಳಿಯ ಲ್ಯಾಮಿಂಗ್ಟನ್ ರಸ್ತೆಯಲ್ಲಿರುವ ಗ್ರಂಥಾಲಯದ ಹಿಂದಿರುವ ವಿದ್ಯುತ್ ಟ್ರಾನ್ಸಫಾರ್ಮರ್‌ನಲ್ಲಿ ಬೆಂಕಿ ಹತ್ತಿ ಉರಿದಿದ್ದು, ಜನರು ಆತಂಕಗೊಂಡು ಗ್ರಂಥಾಲಯದಿಂದ ಹೊರ ನಡೆದಿದ್ದರು. ಈ ಕುರಿತು ನಿಮ್ಮ ಪಬ್ಲಿಕ್ ನೆಕ್ಸ್ಟ್ 'ಹೆಸ್ಕಾಂ ನಿರ್ಲಕ್ಷ್ಯದಿಂದ ಜನರಲ್ಲಿ ಆತಂಕ:ಬೆಂಕಿಯಿಂದ ಬೆಚ್ಚಿದ ಜನರು' ಎಂಬ ಶೀರ್ಷಿಕೆಯ ಅಡಿಯಲ್ಲಿ ವರದಿ ಪ್ರಸಾರ ಮಾಡಿತ್ತು. ವರದಿ ಪ್ರಸಾರಗೊಂಡ ಕೆಲವು ಕ್ಷಣಗಳಲ್ಲಿಯೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇಂದು ಕೂಡ ಕಾರ್ಯಾಚರಣೆ ನಡೆಸಿ ಸಮಸ್ಯೆಗೆ ಪರಿಹಾರ ಕಲ್ಪಿಸಿದ್ದು, ಪಬ್ಲಿಕ್ ನೆಕ್ಸ್ಟ್ ವರದಿ ಪ್ರಸಾರವಾದ 24 ಗಂಟೆಯಲ್ಲಿಯೇ ಇಂಪ್ಯಾಕ್ಟ್ ಆಗಿದೆ. ಈ ಕುರಿತು ಸಾರ್ವಜನಿಕರು ಕೂಡ ಅಭಿನಂದನೆ ಸಲ್ಲಿಸಿದ್ದಾರೆ.

ಒಟ್ಟಿನಲ್ಲಿ ಸಾರ್ವಜನಿಕರ ಸಮಸ್ಯೆಗೆ ಹೆಸ್ಕಾಂ ಇಲಾಖೆ ಸ್ಪಂದಿಸಿದ್ದು, ಮುಂಬರುವ ದಿನಗಳಲ್ಲಿ ಸೂಕ್ತ ಸಮೀಕ್ಷೆ ಕಾರ್ಯವನ್ನು ನಡೆಸಿ ಜನರ ವಿದ್ಯುತ್ ಸಮಸ್ಯೆಗೆ ಬ್ರೇಕ್ ಹಾಕಬೇಕಿದೆ.

Edited By : Manjunath H D
Kshetra Samachara

Kshetra Samachara

25/05/2022 06:59 pm

Cinque Terre

45.32 K

Cinque Terre

1

ಸಂಬಂಧಿತ ಸುದ್ದಿ