ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಬೆಳ್ಳಂಬೆಳಿಗ್ಗೆ ತೆರವು ಕಾರ್ಯಾಚರಣೆಗಿಳಿದ ಪಾಲಿಕೆ

ಧಾರವಾಡ: ಮಂಗಳವಾರ ಬೆಳ್ಳಂಬೆಳಿಗ್ಗೆ ಮಹಾನಗರ ಪಾಲಿಕೆ ಅಧಿಕಾರಿಗಳು ಪೊಲೀಸರ ಜೊತೆಗೂಡಿ ಫುಟಪಾಥ್ ಜಾಗ ಅತಿಕ್ರಮಣ ಮಾಡಿದ್ದ ಅಂಗಡಿಗಳ ತೆರವು ಕಾರ್ಯಾಚರಣೆ ನಡೆಸಿದರು.

ಧಾರವಾಡದ ಮಾರುಕಟ್ಟೆ ರಸ್ತೆ, ಸುಭಾಷ ರಸ್ತೆ, ಲೈನ್ ಬಜಾರ್ ಸೇರಿದಂತೆ ಅನೇಕ ಕಡೆಗಳಲ್ಲಿ ಫುಟಪಾಥ್ ಹಾಗೂ ಮಾರುಕಟ್ಟೆ ಜಾಗವನ್ನು ಅತಿಕ್ರಮಣ ಮಾಡಿದ್ದ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಲಾಯಿತು.

ಇದಕ್ಕೆ ಅನೇಕ ವ್ಯಾಪಾರಸ್ಥರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ಕೂಡ ನಡೆಸಿದರು. ವ್ಯಾಪಾರಸ್ಥರ ವಿರೋಧದ ನಡುವೆಯೂ ಪಾಲಿಕೆ ಅಧಿಕಾರಿಗಳು ಫುಟಪಾಥ್ ಜಾಗ ಅತಿಕ್ರಮಣ ಮಾಡಿಕೊಂಡಿದ್ದ ಅಂಗಡಿಗಳನ್ನು ತೆರವುಗೊಳಿಸಿದರು.

Edited By : Manjunath H D
Kshetra Samachara

Kshetra Samachara

29/12/2020 01:06 pm

Cinque Terre

32.42 K

Cinque Terre

4

ಸಂಬಂಧಿತ ಸುದ್ದಿ