ಧಾರವಾಡ: ಬೀದಿ ಬದಿ ವ್ಯಾಪಾರಿಗಳ ಅಂಗಡಿಗಳನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ತೆರವುಗೊಳಿಸಿದ್ದನ್ನು ವಿರೋಧಿಸಿ ವ್ಯಾಪಾರಿಗಳು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಅನೇಕ ವರ್ಷಗಳಿಂದ ಬಡ ವ್ಯಾಪಾರಿಗಳು ಬೀದಿ ಬದಿ ಅಂಗಡಿ ಇಟ್ಟುಕೊಂಡು ವ್ಯಾಪಾರ ಮಾಡುವ ಮೂಲಕ ಜೀವನ ನಡೆಸುತ್ತಿದ್ದಾರೆ. ಅಂತವರ ಹೊಟ್ಟೆಯ ಮೇಲೆ ಹೊಡೆಯುವ ಕೆಲಸವನ್ನು ಮಹಾನಗರ ಪಾಲಿಕೆ ಮಾಡುತ್ತಿದೆ.
ಬೀದಿ ಬದಿ ವ್ಯಾಪಾರಿಗಳು ಇಟ್ಟುಕೊಂಡಿದ್ದ ಅಂಗಡಿಗಳನ್ನು ಇಂದು ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಿದ್ದಾರೆ. ಇದರಿಂದ ಬಡ ವ್ಯಾಪಾರಿಗಳಿಗೆ ತೀವ್ರ ಆಘಾತವಾಗಿದ್ದು, ದಿಕ್ಕು ತೋಚದಂತಾಗಿದೆ.
ಕೂಡಲೇ ಜಿಲ್ಲಾಧಿಕಾರಿಗಳು ಮಧ್ಯೆ ಪ್ರವೇಶಿಸಿ ಬೀದಿ ಬದಿ ವ್ಯಾಪಾರಿಗಳಿಗೆ ನ್ಯಾಯ ಒದಗಿಸಬೇಕು ಎಂದು ವ್ಯಾಪಾರಸ್ಥರು ಒತ್ತಾಯಿಸಿದರು.
Kshetra Samachara
29/12/2020 03:45 pm