ಹುಬ್ಬಳ್ಳಿ:ಪ್ರಾದೇಶಿಕ ಸಾರಿಗೆ ಇಲಾಖೆಯ ಇ- ವಾಹನ ಪೋರ್ಟಲ್ ನಲ್ಲಿ ನೋಂದಣಿಯಾಗದೇ ಉಳಿದಿರುವ ಭಾರತ ಸ್ಟೇಜ್-4 ಮಾಪನದ ಎಲ್ಲಾ ವಾಹನಗಳನ್ನು ಜನವರಿ 16 ರವರೆಗೆ ಕರ್ನಾಟಕ ರಾಜ್ಯದಲ್ಲಿ ನೋಂದಾಯಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ.
ಸಾರ್ವಜನಿಕರು ನಿಗದಿತ ಅವಧಿಯೊಳಗೆ ವಾಹನಗಳನ್ನು ನೋಂದಾಯಿಸಿಕೊಳ್ಳಬೇಕು. ನಂತರ ಸಲ್ಲಿಕೆಯಾಗುವ ನೋಂದಣಿಗಳನ್ನು ಪರಿಗಣಿಸಲಾಗುವುದಿಲ್ಲ. ಸಾರ್ವಜನಿಕರಿಗೆ ಇದು ಕೊನೆಯ ಅವಕಾಶವಾಗಿದೆ ಎಂದು ಹುಬ್ಬಳ್ಳಿಯ ಗಬ್ಬೂರ ಕ್ರಾಸ್ ನಲ್ಲಿರುವ ಪೂರ್ವ ಕಚೇರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಅಪ್ಪಯ್ಯ ನಾಲ್ವತ್ವಾಡಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
02/01/2021 03:36 pm