ಹುಬ್ಬಳ್ಳಿ : ಸ್ಮಾರ್ಟ್ ಸಿಟಿ ಕನಸು ಕಾಣುತ್ತಿರುವ ರಾಜಕೀಯ ಮುಖಂಡರು ಹಾಗೂ ಅಧಿಕಾರಿಗಳು ಪಾಲಿಕೆ ಕಸ ವಿಲೇವಾರಿ ಮಾಡುವುದನ್ನು ಮರೆತಂತಿದೆ.
ನಗರದಲ್ಲಿ ತ್ಯಾಜ್ಯ ವಿಲೇವಾರಿಯಾಗದೆ ರಸ್ತೆ ಉದ್ದಕ್ಕೂ ಕಸದ ರಾಶಿ ರಾರಾಜಿಸುತ್ತಿದೆ.
ನಗರದಲ್ಲಿ ಸ್ವಚ್ಚತೆ ಬಗ್ಗೆ ಗಮನ ಹರಿಸುವಂತೆ, ಸರಕಾರ ಪಾಲಿಕೆಗೆ ಆದೇಶ ನೀಡಿದ್ರು ಪಾಲಿಕೆ ಮಾತ್ರ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ.
ನಗರದ ಕೇಶ್ವಾಪೂರದ ಬಾರಾಕೊಟ್ರಿ ಬಳಿ ಅಧಿಕಾರಿಗಳ ಕರ್ತವ್ಯ ಲೋಪದಿಂದ ದಿನದಿಂದ ದಿನಕ್ಕೆ ಕಸದ ಸಮಸ್ಯೆ ಹೆಚ್ಚಾಗುತ್ತಿದೆ.
ಜನ ಇದೇನಾ ಸ್ಮಾರ್ಟ್ ಸಿಟಿ ಎಂದು ಉಗಿಯುತ್ತಿದ್ದಾರೆ.
ಇನ್ನಾದರೂ ಪಾಲಿಕೆ ಅಧಿಕಾರಿಗಳು ಕಸ ವಿಲೇವಾರಿಗೆ ಸೂಕ್ತ ಕ್ರಮ ಕೈಗೊಳ್ಳುವರೇ ಎಂಬುವುದನ್ನು ಕಾದು ನೋಡಬೇಕಿದೆ.
Kshetra Samachara
08/01/2021 01:28 pm