ಅಣ್ಣಿಗೇರಿ : ಪಟ್ಟಣದ ಸುಮಾರು 50ಸಾವಿರಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವ ಅಂಬಿಗೇರಿ ಕುಡಿಯುವ ನೀರಿನ ಕೆರೆಗೆ ಸುಮಾರು 80 ಲಕ್ಷ ಅನುದಾನದಲ್ಲಿ ನಿರ್ಮಾಣ ಮಾಡುತ್ತಿರುವ ಕಂಪೌಂಡ ಕಾಮಗಾರಿ ಸಂಪೂರ್ಣ ಕಳಪೆ ಗುಣಮಟ್ಟದಿಂದ ಕೂಡಿದ್ದರೂ ಕೂಡಾ ಸಂಬಂಧಿಸಿದ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಸ್ಥಳೀಯ ಶಾಸಕರ ವಿಶೇಷ ಅನುದಾನದಲ್ಲಿ ಈ ಕುಡಿಯುವ ನೀರಿನ ಕೆರೆಯ ಕಂಪೌಂಡ ಕಾಮಗಾರಿ ಆರಂಭವಾಗಿದೆ. ಆದರೆ ಈ ಕಾಮಗಾರಿ ಕಳಪೆ ಗುಣಮಟ್ಟದ ಸಾಮಾಗ್ರಿಗಳಿಂದ ಕೂಡಿದರೂ ಸಹ ಸ್ಥಳೀಯ ಪುರಸಭೆ ಹಾಗೂ ಜಿಲ್ಲಾಡಳಿತ ಸುಮ್ಮನೆ ಮೌನವಹಿಸಿರುವದು ಯಾವ ಕಾರಣಕ್ಕಾಗಿ ಅನ್ನುವದು ಗೊತ್ತಿಲ್ಲ.
ಈ ಕುರಿತು ಜಿಲ್ಲಾ ಎಇಇ ಮತ್ತು ಪುರಸಭೆ ಮುಖ್ಯಾಧಿಕಾರಿಗಳ ಗಮನಕ್ಕೆ ತಂದರೆ ಹಾರಿಕೆಯ ಉತ್ತರ ನೀಡುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಅಂದಾಜು ಪತ್ರಿಕೆಯಲ್ಲಿ ಇರುವ ಸಾಮಗ್ರಿಗಳನ್ನು ಹೊರತು ಪಡಿಸಿ ಬೇರೆ ಗುಣಮಟ್ಟವಿಲ್ಲದ ಸಾಮಗ್ರಿಗಳನ್ನು ಬಳಕೆ ಮಾಡಿ ಕಂಪೌಂಡ ನಿರ್ಮಿಸುತ್ತಿರುವದನ್ನು ಮುಖ್ಯಾಧಿಕಾರಿ ಗಮನಿಸಿದರು ಕೂಡಾ ಕ್ರಮ ಕೈಗೊಳ್ಳದೇ ಇರುವುದು ದುರದೃಷ್ಟಕರ ಸಂಗತಿ ಎಂದು ಸ್ಥಳೀಯರು ಆರೋಪಿಸಿದರು.
ಇನ್ನು ಮುಂದಾದರೂ ಸಂಬಂಧಿಸಿದ ಅಧಿಕಾರಿಗಳು ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ 80 ಲಕ್ಷ ಅನುದಾನದ ಕಳಪೆ ಕಾಮಗಾರಿ ಸ್ಥಳಕ್ಕೆ ಬೇಟಿ ನೀಡಿ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಪಬ್ಲಿಕ್ ನೆಕ್ಸ್ಟ್ ಗೆ ತಿಳಿಸಿದರು.
Kshetra Samachara
08/01/2021 02:45 pm