ನವಲಗುಂದ : ನವಲಗುಂದ ಪಟ್ಟಣದ ಅಣ್ಣಿಗೇರಿ ಕ್ರಾಸ್ ಬಳಿ ಇರುವ ಶುದ್ಧ ಕುಡಿಯುವ ನೀರಿನ ಘಟಕದ ವ್ಯರ್ಥ ನೀರು ಈಗ ರಸ್ತೆ ಮೇಲೆ ಹರಿಯುತ್ತಿದ್ದು, ಇದು ಅಪಾಯಕ್ಕೆ ಆಹ್ವಾನ ನೀಡುವಂತೆ ಕಾಣುತ್ತಿದೆ.
ಶುದ್ಧ ಕುಡಿಯುವ ನೀರಿನ ಘಟಕ ಇದೆ ಅಂದಮೇಲೆ ಅಲ್ಲಿ ವ್ಯರ್ಥವಾದ ನೀರು ಹೋಗಲು ಇನ್ನೊಂದು ವ್ಯವಸ್ಥೆ ಇರಲೇ ಬೇಕಲ್ಲವೇ, ಆದ್ರೆ ಈ ಶುದ್ಧ ಕುಡಿಯುವ ನೀರಿನ ಘಟಕದ ನೀರು ಚರಂಡಿಗೆ ಸೇರುವ ಬದಲು ರಸ್ತೆಗೆ ಬಂದಿದೆ ಇದರಿಂದ ದ್ವಿಚಕ್ರ ವಾಹನ ಸವಾರರು ಸ್ಕಿಡ್ ಆಗಿ ಬೀಳುವ ಆತಂಕ ಸಹ ಇದೆ. ಸಂಬಂಧ ಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಸಮಸ್ಯೆ ಬಗೆಹರಿಸಬೇಕಿದೆ.
Kshetra Samachara
09/01/2021 05:08 pm