ಅಣ್ಣಿಗೇರಿ: ಪಟ್ಟಣದ ಮಧ್ಯಭಾಗದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 63ರ ಚತುಷ್ಪಥ ರಸ್ತೆ ನಿರ್ಮಾಣದಿಂದ ತುಂಬಾ ಅನಾನುಕೂಲವಾಗುತ್ತಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.
ಪಟ್ಟಣದಿಂದ ಸಾಕಷ್ಟು ಜನರು ಮತ್ತು ರೈತರು ತಮ್ಮ ಎತ್ತು ಚಕ್ಕಡಿ, ಟ್ಯಾಕ್ಟರ್‌ಗಳನ್ನು ತೆಗೆದುಕೊಂಡು ಇದೇ ಮಾರ್ಗವಾಗಿ ಹೋಗುತ್ತಾರೆ. ಅಷ್ಟೇ ಅಲ್ಲದೆ ವಿದ್ಯಾರ್ಥಿಗಳು ಕೂಡ ಈ ಮಾರ್ಗವಾಗಿ ಶಾಲೆಗೆ ಹೋಗುವಾಗ ಜೀವವನ್ನು ಗಟ್ಟಿಯಾಗಿ ಹಿಡಿದುಕೊಂಡು ಸಾಗುವ ಪರಿಸ್ಥಿತಿ ಎದುರಾಗಿದೆ. ಹೀಗಿದ್ದರೂ ಸಂಬಂಧಿಸಿದ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಪಟ್ಟಣದ ಜನರ ಬಗ್ಗೆ ಕಾಳಜಿ ವಹಿಸದೇ ಇರುವುದು ದುರದೃಷ್ಟಕರ ಸಂಗತಿಯಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರಂತರವಾಗಿ ವಾಹನಗಳ ದಟ್ಟಣೆ ಹೆಚ್ಚಾಗುತ್ತಿದೆ. ಅಷ್ಟೇ ಅಲ್ಲದೇ ಈ ರಸ್ತೆ ಮೇಲೆ ಸಾಕಷ್ಟು ಅಪಘಾತಗಳು ಸಂಭವಿಸಿ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ.
ಇತ್ತೀಚೆಗೆ 15 ವರ್ಷದ ಯುವಕನೊಬ್ಬ ಈ ರಸ್ತೆ ದಾಟುವಾಗ ಮೃತಪಟ್ಟಿದ್ದ. ಇನ್ನಾದರೂ ಇದಕ್ಕೆ ಸಂಭಂದಿಸಿದ ಅಧಿಕಾರಿಗಳು ಪಟ್ಟಣದಲ್ಲಿ ಹಾಯ್ದು ಹೋಗಿರುವ ಚತುಷ್ಪಥ ರಸ್ತೆಯ ನಿರ್ಮಾಣದಿಂದ ಆಗುವ ಅವಘಡಗಳನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಪಬ್ಲಿಕ್ ನೆಕ್ಸ್ಟ್ ಮೂಲಕ ಸಾರ್ವಜನಿಕರು ಮನವಿ ಮಾಡಿಕೊಂಡಿದ್ದಾರೆ.
Kshetra Samachara
20/01/2021 04:46 pm