ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಇಪ್ಪತ್ತೈದು ವರ್ಷದ ಜ್ವಲಂತ ಸಮಸ್ಯೆಗೆ ಸಿಕ್ಕಿತು ಮುಕ್ತಿ: ಪಬ್ಲಿಕ್ ನೆಕ್ಸ್ಟ್ ಕಾರ್ಯಕ್ಕೆ ಜನಮೆಚ್ಚುಗೆ

ಪಬ್ಲಿಕ್ ನೆಕ್ಸ್ಟ್ ಬಿಗ್ ಇಂಪ್ಯಾಕ್ಟ್

ಹುಬ್ಬಳ್ಳಿ: ಅದು ಸುಮಾರು ಇಪ್ಪತ್ತೈದು ವರ್ಷಗಳ ಜ್ವಲಂತ ಸಮಸ್ಯೆ.ಇಲ್ಲಿನ ಜನರು ಆ ಸಮಸ್ಯೆಯಿಂದ ಬೇಸತ್ತ ಹೋಗಿದ್ದರು.ನಿತ್ಯವೂ ಸಮಸ್ಯೆಯಿಂದ‌ ತಪ್ಪಿಸಿಕೊಳ್ಳಲು ಸಾಧ್ಯವಾಗದಷ್ಟು ಸಮಸ್ಯೆ ಸುಳಿಯಲ್ಲಿ ಸಿಲುಕಿಕೊಂಡಿದ್ದರು.

ಆದರೆ ನಿಮ್ಮ ಪಬ್ಲಿಕ್ ನೆಕ್ಸ್ಟ್ ಆ ಗ್ರಾಮಕ್ಕೆ ಭೇಟಿ ನೀಡಿದ್ದೇ ತಡ ಆಗ್ರಾಮದ ಇಪ್ಪತ್ತೈದು ವರ್ಷಗಳ ಸಮಸ್ಯೆಗೆ ಪರಿಹಾರ ಸಿಕ್ಕಂತಾಗಿದೆ.ಅಷ್ಟಕ್ಕೂ ಅಲ್ಲಿ ಆಗಿದ್ದ ಸಮಸ್ಯೆ ಆದ್ರೂ ಏನು ನಿಮ್ಮ ಪಬ್ಲಿಕ್ ನೆಕ್ಸ್ಟ್ ಮಾಡಿದ್ದಾದರೂ ಏನು ಅಂತೀರಾ ಈ ಸ್ಟೋರಿ ನೋಡಿ..

ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮ ನವಲಗುಂದ ವಿಧಾನಸಭಾ ವ್ಯಾಪ್ತಿಯಲ್ಲಿ ಬರುವ ಈ ಗ್ರಾಮದಲ್ಲಿ ಸುಮಾರು ಇಪ್ಪತ್ತೈದು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ತಲೆದೊರಿತ್ತು.ಜನರು ಒಂದು ಕೊಡಕ್ಕೆ ಐದು ರೂಪಾಯಿ ಕೊಟ್ಟು ನೀರನ್ನು ಖರೀದಿಸಿ ಕುಡಿಯುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು.ಈ ಕುರಿತು ನಿಮ್ಮ ಪಬ್ಲಿಕ್ ನೆಕ್ಸ್ಟ್ ತಂಡ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದ ಜನರು ಅನುಭವಿಸುತ್ತಿರುವ ಕಷ್ಟಗಳನ್ನು ಏಳೆ ಏಳೆಯಾಗಿ ಬಿಚ್ಚಿಟ್ಟು ಅಧಿಕಾರಿಗಳು ಶಾಸಕರ ಗಮನಕ್ಕೆ ತಂದಿತು. ವರದಿಗೆ ಎಚ್ಚೆತ್ತುಕೊಂಡ ಶಾಸಕರು ಇಲ್ಲಿನ ಇಪ್ಪತ್ತೈದು ವರ್ಷಗಳ ಜ್ವಲಂತ ಸಮಸ್ಯೆಗೆ ಸ್ಪಂದಿಸಿದ್ದಾರೆ.

ಸುಳ್ಳ ಗ್ರಾಮದಲ್ಲಿ ಮೂರು‌ ಕುಡಿಯುವ ನೀರಿನ ಶುದ್ಧ ಘಟಕಗಳು ಹಳ್ಳ ಹಿಡಿದು ಮೂರು ವರ್ಷ ಕಳೆದಿದ್ದವು.ಅಲ್ಲದೇ ಮಲಪ್ರಭಾ ಬಲದಂಡೆ ಕಾಲುವೆಯಿಂದ ನೀರು ತರುವ ಯೋಜನೆ ಅರ್ಧಕ್ಕೆ ನಿಂತು ಎಂಟು ವರ್ಷ ಕಳೆದಿತ್ತು. ಗ್ರಾಮಸ್ಥರು ತಮ್ಮ ಸಮಸ್ಯೆಗಳ ಬಗ್ಗೆ ಜನಪ್ರತಿನಿಧಿಗಳು, ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ಆಗಿರಲಿಲ್ಲ.

ಇತ್ತ ನಿತ್ಯ ಶುದ್ಧ ನೀರಿನ ಮಾರಾಟ ಎಗ್ಗಿಲ್ಲದೇ ಸಾಗುತ್ತಿತ್ತು. ಕುಡಿಯುವ ನೀರಿಲ್ಲದ ಗ್ರಾಮಗಳಿಗೆ ಉಚಿತವಾಗಿ ನೀರು ಪೂರೈಕೆ ಮಾಡಬೇಕಾದ ಸರ್ಕಾರ, ಅಧಿಕಾರಿಗಳು ಜಾಣ ಕುರುತನ ತೋರುತ್ತಿದ್ದರು ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂಬುವ ಸದುದ್ದೇಶದಿಂದ ನಿಮ್ಮ ಪಬ್ಲಿಕ್ ನೆಕ್ಸ್ಟ್ ಜನರ ಧ್ವನಿಯಾಗಿ ಸಾರ್ವಜನಿಕ ಸಮಸ್ಯೆಗಳ ಕುರಿತು ವರದಿ ಮಾಡಿದ್ದು,ಈಗ ಇಪ್ಪತ್ತೈದು ವರ್ಷಗಳ ಸಮಸ್ಯೆಗೆ ಪರಿಹಾರ ದೊರೆತಿದೆ.

ಒಟ್ಟಿನಲ್ಲಿ ಪಬ್ಲಿಕ್ ನೆಕ್ಸ್ಟ್ ವರದಿಯಿಂದ ಶುದ್ಧ ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣವೇ ನವಲಗುಂದ ವಿಧಾನಸಭಾ ಕ್ಷೇತ್ರದ ಶಾಸಕ ಶಂಕರಪಾಟೀಲ ಮುನೇನಕೊಪ್ಪ ಅವರು ಸ್ಪಂದಿಸಿ ಸಾರ್ವಜನಿಕ ಸಮಸ್ಯೆಗಳನ್ನು ಬಗೆಹರಿಸಿದ್ದಾರೆ.ಅಲ್ಲದೇ ಸುಳ್ಳ ಗ್ರಾಮಕ್ಕೆ ಭೇಟಿ ನೀಡಿ ಶುದ್ಧ ಕುಡಿಯುವ ನೀರಿನ ಘಟಕದ ನಿರ್ವಹಣೆ ಹಾಗೂ ಸ್ವಚ್ಚತೆಗೆ ಆದ್ಯತೆ ನೀಡುವಂತೆ ಖಡಕ್ ಸೂಚನೆ ನೀಡಿದ್ದಾರೆ.

Edited By : Manjunath H D
Kshetra Samachara

Kshetra Samachara

20/01/2021 05:58 pm

Cinque Terre

44.38 K

Cinque Terre

7

ಸಂಬಂಧಿತ ಸುದ್ದಿ