ಹುಬ್ಬಳ್ಳಿ: ಆತ್ಮ ನಿರ್ಭರ ಭಾರತ ಅಭಿಯಾನದ ಅಂಗವಾಗಿ ಭಾರತ ಸರ್ಕಾರ ಪ್ರಧಾನ ಮಂತ್ರಿ ಕಿರು ಆಹಾರ ಉದ್ದಮೆಗಳ ನಿಯಮ ಬದ್ದಗೊಳಿಸುವಿಕೆ ಯೋಜನೆ ಜಾರಿಗೆ ತಂದಿದೆ.
ಒಂದು ಜಿಲ್ಲೆ ಒಂದು ಉತ್ಪನ್ನ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಮಾವು ಸಂಸ್ಕರಣ ಘಟಕಗಳಿಗೆ ಮಾವಿನ ಬೆಳೆಯ ವರ್ಗೀಕರಣ, ಶ್ರೇಣೀಕರಣ, ಬ್ಯ್ರಾಂಡಿಂಗ್, ಲೆಬಲಿಂಗ್,ಮಾರುಕಟ್ಟೆಯ ಬೆಂಬಲ ಮತ್ತು ರಪ್ತು ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ಮೂಲಕ ವ್ಯಕ್ತಿ ಅಥವಾ ಸಂಸ್ಥೆಗಳನ್ನು ಉದ್ದಿಮೆದಾರರನ್ನಾಗಿ ರೂಪಿಸಲು ಈ ಯೋಜನೆ ಹಮ್ಮಿಕೊಳ್ಳಲಾಗಿದೆ.
ಮಾವು ಸಂಸ್ಕರಣ ಕಾರ್ಯದಲ್ಲಿ ನಿರತರಾಗಿರುವ ಸಹಕಾರ ಸಂಘಗಳು, ಉತ್ಪಾದಕ ಸಂಸ್ಥೆಗಳು, ಸ್ವ ಸಹಾಯ ಸಂಘ ಮತ್ತು ಸಾಮಾನ್ಯ ಸೌಕರ್ಯ ಒದಗಿಸುವ ಸಂಸ್ಥೆಗಳು ಈ ಯೋಜನೆ ಪಡೆಯಲು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕೃಷಿ ಅಥವಾ ತೋಟಗಾರಿಕೆ ಇಲಾಖೆ ಸಂಪರ್ಕಿಸಬಹದು ಎಂದು ಪ್ರಕಟಣೆ ತಿಳಿಸಿದೆ.
Kshetra Samachara
20/01/2021 07:47 pm