ಶಲವಡಿ: ಬಯಲು ಶೌಚ ಮುಕ್ತ ಗ್ರಾಮ ಮಾಡಲು ರಾಜ್ಯ ಸರ್ಕಾರ ಶೌಚಾಲಯ ನಿರ್ಮಾಣಕ್ಕೆ ಅನುದಾನ ನೀಡುತ್ತಿದೆ. ಹೀಗಿದ್ದರೂ ಕೆಲ ಗ್ರಾಮಗಳು ಇಂದಿಗೂ ಬಯಲು ಶೌಚ ಮುಕ್ತವಾಗಿಲ್ಲ. ಇದಕ್ಕೆ ಅಧಿಕಾರಿಗಳು, ಜನ ಪ್ರತಿನಿಧಿಗಳ ವೈಫಲ್ಯವೋ ಅಥವಾ ಸಾರ್ವಜನಿಕರ ನಿಷ್ಕಾಳಜಿಯೋ ಎನ್ನುವ ಪ್ರಶ್ನೆ ಶುರುವಾಗಿದೆ.
ಅಣ್ಣಿಗೇರಿ ತಾಲೂಕಿನ ಶಲವಡಿ ಗ್ರಾಮದ ಇದಕ್ಕೊಂದು ನಿದರ್ಶನವಾಗಿದೆ. ಈ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಯಾವುದೇ ರಸ್ತೆಗೆ ಹೋದರೂ ಗಬ್ಬು ನಾರುತ್ತದೆ. ಅಷ್ಟೇ ಅಲ್ಲದೆ ಗ್ರಾಮ ಪಂಚಾಯತಿ ಆವರಣದಲ್ಲೇ ಗ್ರಾಮಸ್ಥರು ಶೌಚ ಮಾಡಲು ಹೋಗುತ್ತಾರೆ. ಈ ಬಗ್ಗೆ ಗೊತ್ತಿದ್ದರೂ ಪಂಚಾಯತಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಜನ ಪ್ರತಿನಿಧಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೂಡ ಕೇಳಿ ಬಂದಿದೆ.
ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳಬೇಕಿದೆ. ಈ ಮೂಲಕ ಬಯಲು ಶೌಚ ಮುಕ್ತ ಗ್ರಾಮ ನಿರ್ಮಾಣಕ್ಕೆ ಶ್ರಮಿಸಬೇಕು ಎನ್ನುವುದು ಕೆಲ ಯುವಕರ ಆಗ್ರಹವಾಗಿದೆ.
Kshetra Samachara
21/01/2021 09:16 am