ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಅಕ್ರಮ ಮದ್ಯ ಮಾರಾಟದ ಸಲುವಾಗಿ ಸಾಕಾಗೇತ್ರಿ..

ಧಾರವಾಡ: ಕರ್ನಾಟಕ ಹೈಕೋರ್ಟ್ ಆದೇಶದ ಪ್ರಕಾರ ಅಕ್ರಮ ಮದ್ಯ ಮಾರಾಟಕ್ಕೆ ನಿಷೇಧ ಹೇರುವಂತೆ ಆಗ್ರಹಿಸಿ ಮದ್ಯ ನಿಷೇಧ ಆಂದೋಲನ-ಕರ್ನಾಟಕದ ವತಿಯಿಂದ ಕಲಘಟಗಿ ತಾಲೂಕಿನ ವಿವಿಧ ಹಳ್ಳಿಗಳ ಮಹಿಳೆಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.

ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಮಹಿಳೆಯರು, ಉಚ್ಛ ನ್ಯಾಯಾಲಯದಲ್ಲಿ ಈಗಾಗಲೇ ಅಕ್ರಮ ಮದ್ಯ ನಿಷೇಧ ಮಾಡಬೇಕು ಎಂದು ಆದೇಶ ಬಂದಿದೆ. ಆದರೆ ಸರ್ಕಾರ ಇಲ್ಲಿಯವರೆಗೂ ಅಕ್ರಮ ಮದ್ಯ ಮಾರಾಟಕ್ಕೆ ಶಿಸ್ತು ಕ್ರಮ ಕೈಗೊಂಡಿಲ್ಲ. ಸರ್ಕಾರ ಕೂಡಲೇ ಗಮನಹರಿಸಿ ತಕ್ಷಣ ಅಕ್ರಮ ಮದ್ಯ ಮಾರಾಟ ನಿಲ್ಲಿಸಬೇಕು 15 ದಿನಗಳಲ್ಲಿ ಅಕ್ರಮ ಮದ್ಯ ಮಾರಾಟ ನಿಷೇಧಿಸದಿದ್ದರೆ ರಾಜ್ಯಾದ್ಯಂತ ಹೋರಾಟಕ್ಕೆ ಮುಂದಾಗುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

Edited By : Manjunath H D
Kshetra Samachara

Kshetra Samachara

27/01/2021 03:46 pm

Cinque Terre

36.94 K

Cinque Terre

3

ಸಂಬಂಧಿತ ಸುದ್ದಿ