ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಎಪಿಎಂಸಿ ಸ್ಥಳಾಂತರದ ಗೊಂದಲಕ್ಕೆ ತಾತ್ಕಾಲಿಕ ತೆರೆ

ನವಲಗುಂದ: ಇಲ್ಲಿನ ತರಕಾರಿ ಮಾರುಕಟ್ಟೆಯನ್ನು ಎಪಿಎಂಸಿಗೆ ಸ್ಥಳಾಂತರಿಸಿದ ವಿಷಯವಾಗಿ ಇಂದು ನವಲಗುಂದ ಪುರಸಭೆಯಲ್ಲಿ ಬೀದಿ ಬದಿ ವ್ಯಾಪಾರಸ್ಥರ ಸಮಸ್ಯೆಗಳ ಬಗ್ಗೆ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.

ಸಭೆಯಲ್ಲಿ ನಡೆದ ಚರ್ಚೆಯಲ್ಲಿ ಗಾಂಧಿ ಮಾರುಕಟ್ಟೆ ಬಳಿ ಇರುವ ನೂತನ ಮಾರುಕಟ್ಟೆಯನ್ನು ಒಂದು ವರ್ಷದೊಳಗಾಗಿ ವ್ಯಾಪಾರಕ್ಕೆ ಅನುವು ಮಾಡಿಕೊಡುವುದಾಗಿ ಭರವಸೆ ನೀಡಲಾಯಿತು. ಹೆಚ್ಚು ಕಡಿಮೆ ಐದು ಕೋಟಿ ರೂ. ಅನುದಾನದಲ್ಲಿ ಕಾಮಗಾರಿ ಆರಂಭ ಮಾಡುವುದಾಗಿ ಪುರಸಭೆ ಅಧ್ಯಕ್ಷ ಮಂಜುನಾಥ್ ಜಾಧವ್ ತಿಳಿಸಿದರು.

ಸದ್ಯ ತರಕಾರಿ ಮಾರುಕಟ್ಟೆಯನ್ನು ಎಪಿಎಂಸಿಯಲ್ಲಿಯೇ ನಡೆಸುವುದು ಮತ್ತು ಮೂಲ ಸೌಕರ್ಯಗಳನ್ನು ಅಲ್ಲಿಯೇ ಕಲ್ಪಿಸಿಕೊಡಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿಗಳಾದ ಖುದಾನವರ ಮತ್ತು ಅಧ್ಯಕ್ಷ ಮಂಜುನಾಥ್ ಜಾಧವ್ ಬೀದಿ ಬದಿ ವ್ಯಾಪಾರಸ್ಥರಿಗೆ ಭರವಸೆಯನ್ನು ನೀಡಿದರು. ಎಪಿಎಂಸಿ ಹೊರತು ಪಡಿಸಿ ಬೇರೆ ಕಡೆಗಳಲ್ಲಿ ತರಕಾರಿ ಮಾರಾಟ ಮಾಡಿದ್ದೇ ಆದಲ್ಲಿ ಅಂತವರ ವಿರುದ್ಧ ಸಂಬಂಧ ಪಟ್ಟ ಅಧಿಕಾರಿಗಳ ಗಮನಕ್ಕೂ ತರಲಾಗುತ್ತದೆ.

Edited By : Vijay Kumar
Kshetra Samachara

Kshetra Samachara

27/01/2021 07:54 pm

Cinque Terre

13.71 K

Cinque Terre

0

ಸಂಬಂಧಿತ ಸುದ್ದಿ