ಧಾರವಾಡ: ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯಿಂದ 2019-20ನೇ ಸಾಲಿನಲ್ಲಿ ವಿತರಣೆಯಾಗಿರುವ ವಿದ್ಯಾರ್ಥಿಗಳ ಬಸ್ ಪಾಸುಗಳನ್ನು ಜನೆವರಿ 31 ರವರೆಗೆ ಸಂಸ್ಥೆಯ ಬಸ್ಸುಗಳಲ್ಲಿ ಮಾನ್ಯ ಮಾಡಲು ಕ್ರಮ ಕೈಗೊಳ್ಳಲಾಗಿತ್ತು. ಆದರೆ ಪಾಸುಗಳನ್ನು ಪಡೆಯಲು ವಿದ್ಯಾರ್ಥಿಗಳಿಗೆ ಸಾಕಷ್ಟು ಕಾಲಾವಕಾಶ ನೀಡುವ ಸಲುವಾಗಿ ಎಲ್ಲಾ ವರ್ಗದ ಶಾಲಾ, ಕಾಲೇಜು ವಿದ್ಯಾರ್ಥಿಗಳು ಕಳೆದ ವರ್ಷದ (2019-2020) ಬಸ್ ಪಾಸ್‍ನೊಂದಿಗೆ ಪ್ರಸ್ತುತ ಸಾಲಿನಲ್ಲಿ ಶಾಲಾ, ಕಾಲೇಜುಗಳಿಗೆ ಪಾವತಿಸಿರುವ ರಸೀದಿ ಜೊತೆಗೆ ಸಂಸ್ಥೆಯ ಬಸ್ಸುಗಳಲ್ಲಿ ಸಂಬಂಧಪಟ್ಟ ಮಾರ್ಗದಲ್ಲಿ ಅಥವಾ ಹೊಸ ವಿಳಾಸದಲ್ಲಿರುವ ಶಾಲಾ, ಕಾಲೇಜುಗಳಿಗೆ ತೆರಳಲು ಅನುಕೂಲವಾಗುವಂತೆ ಫೆಬ್ರುವರಿ 28 ರವರೆಗೆ ಉಚಿತವಾಗಿ ಪ್ರಯಾಣಿಸಲು ಅನುಮತಿಸಲಾಗಿದೆ.
ಎಲ್ಲಾ ವಿದ್ಯಾರ್ಥಿಗಳು ಪ್ರಸ್ತುತ ವರ್ಷದಲ್ಲಿ ಶಾಲಾ, ಕಾಲೇಜುಗಳಿಗೆ ದಾಖಲಾಗಿರುವುದಕ್ಕೆ ಸಂಬಂಧಿಸಿದ ಪ್ರಸಕ್ತ ವರ್ಷದ ಶುಲ್ಕ ಪಾವತಿ ರಸೀದಿಯೊಂದಿಗೆ, 2019-20 ನೇ ಸಾಲಿನ ವಿದ್ಯಾರ್ಥಿ ಬಸ್‍ಪಾಸ್ ತೋರಿಸಿ ಸಂಬಂಧಪಟ್ಟ ಮಾರ್ಗದಲ್ಲಿ ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗಧೂತ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಮತ್ತು ಎಲ್ಲಾ ಶಾಲಾ, ಕಾಲೇಜು ವಿದ್ಯಾರ್ಥಿಗಳು ಸೇವಾಸಿಂಧು ಮೂಲಕ ಪ್ರಸಕ್ತ ವರ್ಷದ ದಾಖಲಾತಿಗಳನ್ನು ಸಲ್ಲಿಸಿ, ನೂತನ ಪಾಸ್ ಪಡೆಯುವಂತೆ ಹುಬ್ಬಳ್ಳಿಯ ವಾಯುವ್ಯ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ, ಸಾರ್ವಜನಿಕ ಸಂಪರ್ಕಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
29/01/2021 06:28 pm