ಹುಬ್ಬಳ್ಳಿ: ರಸ್ತೆ ಸುರಕ್ಷತೆಯಲ್ಲಿ ಇಲಾಖೆಯ ಜೊತೆಗೆ ಸಾರ್ವಜನಿಕ ಪಾತ್ರವು ದೊಡ್ಡದು. ರಸ್ತೆ ಸುರಕ್ಷತೆಯ ಹೊಣೆಗಾರಿಕೆಯಲ್ಲಿ ಸಾರ್ವಜನಿಕರು ಕೈಜೋಡಿಸಬೇಕು ಎಂದು ಧಾರವಾಡ ಪೂರ್ವ ವಿಭಾಗದ ಪ್ರಾದೇಶಿಕ ಸಾರಿಗೆ ಅಧಿಕಾರಿ ಅಪ್ಪಯ್ಯ ನಾಲತ್ವಾಡಮಠ ಹೇಳಿದರು.
32 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಜ.30 ರಂದು, ಸಾರಿಗೆ ಇಲಾಖೆ, ಹುಬ್ಬಳ್ಳಿಯ ಕಾಡಸಿದ್ಧೇಶ್ವರ ಮಹಾವಿದ್ಯಾಲಯ ಹಾಗೂ ರೆಡ್‌ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ರಸ್ತೆ ಸುರಕ್ಷತೆ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಾರ್ವಜನಿಕರು ಖಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸಬೇಕು. ಹೆಲ್ಮೆಟ್ ಸೀಟ್ ಬೆಲ್ಟ್ ಧರಿಸಬೇಕು.ಮಧ್ಯಪಾನ ಮಾಡಿ ವಾಹನ ಚಲಾಯಿಸಬಾರದು. ವಾಹನಗಳನ್ನು ಸುಸ್ಥಿಯಲ್ಲಿ ಇರಿಸಿಕೊಂಡು, ಅಗತ್ಯ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಬೇಕು. ಜಾಗರೂಕತೆಯಿಂದ ವಾಹನ ಚಲಾಯಿಸಿ ಅಪಘಾತಗಳನ್ನು ತಪ್ಪಿಸುಬೇಕು ಎಂದರು.
ಪ್ರಾಂಶುಪಾಲರಾದ ಡಾ. ಉಮಾ ನೆರಲೆ ಮಾತನಾಡಿ, ವಿದ್ಯಾರ್ಥಿಗಳು ನಿಯಮಾನುಸಾರವಾಗಿ ಚಾಲನಾ ಪರವಾನಿಗೆ ಖಡ್ಡಾಯವಾಗಿ ಪಡೆದುಕೊಳ್ಳಬೇಕು. ರಸ್ತೆ ನಿಯಮಗಳನ್ನು ಪಾಲಿಸಬೇಕು, ಸಂಚಾರಿ ಪೊಲೀಸರು ಹಾಗೂ ಸಾರಿಗೆ ಇಲಾಖೆಯ ಸಿಬ್ಬಂದಿಗಳಿಗೆ ಸಹಕರಿಸಬೇಕು. ಧಾವಂತದಲ್ಲಿ ವಾಹನಗಳನ್ನು ಓಡಿಸಬಾರದು. ಜೀವ ಅಮೂಲ್ಯವಾದುದು. ವಿದ್ಯಾರ್ಥಿ ದೆಶೆಯಲ್ಲಿ ಯಾವುದೇ ಅವಘಡಗಳಿಗೆ ತುತ್ತಾಗಬಾರದು ಆದಷ್ಟು ಜಾಗೃತೆಯಿಂದ ವಾಹನವನ್ನು ಚಲಾಯಿಸುವಂತೆ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.
ಸಾರಿಗೆ ಇಲಾಖೆಯಿಂದ ಹೊರತರಲಾಗಿರುವ ರಸ್ತೆ ಸುರಕ್ಷತಾ ಕೈಪಿಡಿಯನ್ನು ಮಹಾವಿದ್ಯಾಲಯದ ವಿದ್ಯಾರ್ಥಿ ವಿದ್ಯಾರ್ಥಿನಿರಿಗೆ ಹಂಚಲಾಯಿತು.
Kshetra Samachara
01/02/2021 07:29 pm