ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಫೆ. 7ರಂದು ರವಿವಾರ ನಡೆಯಲಿರುವ ಕೇಂದ್ರ ಲೋಕಸೇವಾ ಆಯೋಗವು ಅಯೋಜಿಸಿರುವ ಕಂಬೈನ್ಡ್ ಡಿಫೆನ್ಸ್ ಸರ್ವಿಸ್ ಪರೀಕ್ಷೆ ಮತ್ತು ಅಖಿಲ ಭಾರತ ಸೈನಿಕ ಶಾಲೆ ಪ್ರವೇಶಾತಿ ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.
ಪರೀಕ್ಷೆ ಮುಗಿದ ನಂತರ ಅಭ್ಯರ್ಥಿಗಳು ತಮ್ಮ ಊರುಗಳಿಗೆ ತೆರಳಲು ಮಧ್ಯಾಹ್ನದಿಂದ ಹೆಚ್ಚಿನ ಸಂಚಾರ ದಟ್ಟಣೆ ನಿರೀಕ್ಷಿಸಲಾಗಿದೆ. ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಹೆಚ್ಚುವರಿ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.
ಗದಗ,ಕೊಪ್ಪಳ,ರಾಯಚೂರು, ಬಾಗಲಕೋಟೆ, ವಿಜಯಪುರ ಕಡೆಗೆ ಹೋಗುವ ಬಸ್ಸುಗಳು ಹೊಸೂರು ಪ್ರಾದೇಶಿಕ ಬಸ್ ನಿಲ್ದಾಣದಿಂದ ಹೊರಡುತ್ತವೆ.
ಬೆಳಗಾವಿ, ಶಿರಸಿ, ಯಲ್ಲಾಪುರ, ಕಾರವಾರ, ದಾವಣಗೆರೆ, ಶಿವಮೊಗ್ಗ ಕಡೆಗೆ ಹೋಗುವ ಬಸ್ಸುಗಳು ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣದಿಂದ ಹೊರಡುತ್ತವೆ.
ಶಿರಹಟ್ಟಿ,ನವಲಗುಂದ,ಅಣ್ಣಿಗೇರಿ, ಕಲಘಟಗಿ, ಕುಂದಗೋಳ,ತಡಸ ಮತ್ತಿತರ ಗ್ರಾಮೀಣ ಪ್ರದೇಶಗಳ ಬಸ್ಸುಗಳು ಹಳೆ ಬಸ್ ನಿಲ್ದಾಣದಿಂದ ಹೊರಡುತ್ತವೆ ಎಂದು ವಾಕರಸಾ ಸಂಸ್ಥೆ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ .
Kshetra Samachara
05/02/2021 09:04 pm