ಹುಬ್ಬಳ್ಳಿ: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರೈತರು ಹುಬ್ಬಳ್ಳಿ-ವಿಜಯಪುರ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ರಸ್ತೆ ಮಧ್ಯೆ ಟ್ರ್ಯಾಕ್ಟರ್ ನಿಲ್ಲಿಸಿ ರಸ್ತೆ ಬಂದ್ ಮಾಡಿದ ರೈತರು. ಕೇಂದ್ರದ ವಿರುದ್ದ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಸುಮಾರು 50 ಕ್ಕೂ ಹೆಚ್ಚು ರೈತರಿಂದ ಪ್ರತಿಭಟನೆ ನಡೆಸಿದ್ದು,ಹುಬ್ಬಳ್ಳಿ ತಾಲೂಕಿನ ಕಿರೇಸೂರು ಗ್ರಾಮದ ಬಳಿ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇನ್ನೂ ಪ್ರತಿಭಟನೆಯಲ್ಲಿ ಕಿರೇಸೂರು, ಹೆಬಸೂರು, ಬೆನ್ನೂರು ಸೇರಿದಂತೆ ವಿವಿಧ ಗ್ರಾಮಗಳ ರೈತರು ಪಾಲ್ಗೊಂಡಿದ್ದರು.
Kshetra Samachara
06/02/2021 03:53 pm