ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಫೆ.13 ರಂದು ನೂತನ ಕೈಗಾರಿಕಾ ನೀತಿ ಕುರಿತು ಕಾರ್ಯಕ್ರಮ

ಹುಬ್ಬಳ್ಳಿ:ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ, ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಹುಬ್ಬಳ್ಳಿ ಇವರ ಸಹಯೋಗದಲ್ಲಿ ನೂತನ ಕೈಗಾರಿಕಾ ನೀತಿ 2020-25 ಮತ್ತು ಹೂಡಿಕೆ ಅವಕಾಶಗಳ ಕುರಿತು ಕಾರ್ಯಕ್ರಮವನ್ನು ಫೆ. 13 ರಂದು ಬೆಳಿಗ್ಗೆ 10:30 ಕ್ಕೆ ನಗರದ ಡೆನಿಸನ್ಸ್ ಹೋಟೆಲ್ಲಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಜಗದೀಶ್ ಶೆಟ್ಟರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಗೌರವ ಆತಿಥ್ಯಿ ವಹಿಸಲಿದ್ದಾರೆ. ಕಾಸಿಯಾ ಅಧ್ಯಕ್ಷ ಕೆ.ಬಿ ಅರಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ವಿಜಯಲಕ್ಷ್ಮಿ ಪಾಟೀಲ, ಶಾಸಕರಾದ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ಅಬ್ಬಯ್ಯ ಪ್ರಸಾದ್, ಅರವಿಂದ ಬೆಲ್ಲದ, ಎಸ್ ವ್ಹಿ ಸಂಕನೂರ, ಪ್ರದೀಪ್ ಶೆಟ್ಟರ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಅಪರ ನಿರ್ದೇಶಕ ಎಚ್. ಎಂ. ಶ್ರೀನಿವಾಸ್, ಎನ್ ಕೆ ಎಸ್ ಎಸ್ ಐ ಎ ಅಧ್ಯಕ್ಷ ನಿಂಗಣ್ಣ ಬಿರಾದಾರ, ಮತ್ತು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ದೊಡ್ಡ ಬಸವರಾಜು ಭಾಗವಹಿಸುವರು.

Edited By : Nirmala Aralikatti
Kshetra Samachara

Kshetra Samachara

08/02/2021 06:18 pm

Cinque Terre

11.21 K

Cinque Terre

0

ಸಂಬಂಧಿತ ಸುದ್ದಿ