ಹುಬ್ಬಳ್ಳಿ: ಇದೇ ಫೆಬ್ರುವರಿ 16ರಿಂದ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಮುಂಬೈಗೆ ವಿಮಾನ ಸಂಪರ್ಕ ಆರಂಭವಾಗಲಿದೆ. ಏರ್ ಇಂಡಿಯಾ ವಿಮಾನ ಯಾನ ಸಂಸ್ಥೆಯಿಂದ ವಾರಕ್ಕೆ ಮೂರು ವಿಮಾನಗಳು ಹಾರಾಟ ನಡೆಸಲಿವೆ.
ಪ್ರತಿ ಮಂಗಳವಾರ, ಶುಕ್ರವಾರ ಹಾಗೂ ಶನಿವಾರ ಏರ್ ಇಂಡಿಯಾ ವಿಮಾನಗಳು ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಮುಂಬೈಗೆ ತೆರಳಲಿವೆ. ಕೇಂದ್ರ ಸಚಿವ ಹಾಗೂ ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಈ ಮಾಹಿತಿಯನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
Kshetra Samachara
09/02/2021 08:41 am