ಧಾರವಾಡ: ಧಾರವಾಡದ ಸಂಗೊಳ್ಳಿ ರಾಯಣ್ಣ ನಗರದ ಸೋನಿಯಾ ಕಾಲೇಜಿನ ಹಿಂಭಾಗದಲ್ಲಿರುವ ಶಿಂಧೆ ಪ್ಲಾಟ್ ಗೆ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಎಸ್ ಯುಸಿಐ ಪಕ್ಷದ ನೇತೃತ್ವದಲ್ಲಿ ಶಿಂಧೆ ಪ್ಲಾಟ್ ನಾಗರಿಕ ಹೋರಾಟ ಸಮಿತಿ ಸದಸ್ಯರು ಧಾರವಾಡ ಪಾಲಿಕೆ ಎದುರು ಪ್ರತಿಭಟನೆ ನಡೆಸಿದರು.
ಶಿಂಧೆ ಪ್ಲಾಟ್ ನಲ್ಲಿ ಸುಮಾರು 100 ಕುಟುಂಬಗಳು ವಾಸ ಮಾಡುತ್ತಿದ್ದು, ಆ ಕುಟುಂಬಗಳು ಮೂಲ ಸೌಕರ್ಯದಿಂದ ವಂಚಿತವಾಗಿವೆ. ಸರಿಯಾದ ಚರಂಡಿ ಇಲ್ಲದೇ ಇರುವುದರಿಂದ ಮಳೆ ಬಂದಾಗ ಕೊಳಚೆ ನೀರು ಮನೆಗಳಿಗೆ ನುಗ್ಗುತ್ತಿದೆ. ಬೀದಿ ದೀಪಗಳು ಈ ಪ್ಲಾಟ್ ನಲ್ಲಿ ಇಲ್ಲದೇ ರಾತ್ರಿ ವೇಳೆ ಸಂಚರಿಸುವುದು ಕಷ್ಟವಾಗಿದೆ. ಕೂಡಲೇ ಮಹಾನಗರ ಪಾಲಿಕೆ ಈ ಶಿಂಧೆ ಪ್ಲಾಟ್ ಗೆ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
Kshetra Samachara
11/02/2021 11:41 am