ಹುಬ್ಬಳ್ಳಿ: 32 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ 2021ರ ಅಂಗವಾಗಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ, ಜಿಲ್ಲಾಡಳಿತ, ಸಾರಿಗೆ ಇಲಾಖೆ, ಮೋಟಾರ್ ಡ್ರೈವಿಂಗ್ ಸ್ಕೂಲ್ ಮಾಲೀಕರ ಅಸೋಸಿಯೇಷನ್, ಹಾಗೂ ಪ್ರೇಮ ಬಿಂದು ಬ್ಲಡ್ ಬ್ಯಾಂಕ್ ಹುಬ್ಬಳ್ಳಿ ಇವರುಗಳ ಸಹಯೋಗದಲ್ಲಿ ಫೆ. 16 ರಂದು ಬೆಳಿಗ್ಗೆ 11 ಗಂಟೆಗೆ ಸಾರಿಗೆ ಅಧಿಕಾರಿಗಳ ಕಚೇರಿ ಗಬ್ಬೂರಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ.
ಸ್ವ-ಇಚ್ಛೆಯಿಂದ ಸಾರ್ವಜನಿಕರು ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡುವುದರ ಮೂಲಕ ಅಮೂಲ್ಯವಾದ ಜೀವ ಉಳಿಸಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಅಪ್ಪಯ್ಯಾ ನಾಲತವಾಡ ಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
15/02/2021 07:26 pm