ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಂಪ್ಯೂಟರ್ ಆಧಾರಿತ ತರಬೇತಿಗೆ ಹೆಚ್ಚು ಆದ್ಯತೆ ನೀಡಿ

ಧಾರವಾಡ: ಆಡಳಿತದ ಎಲ್ಲಾ ಹಂತಗಳಲ್ಲಿ ಹೆಚ್ಚು ಹೆಚ್ಚು ತಾಂತ್ರಿಕತೆ ಅಳವಡಿಸಿಕೊಂಡರೆ ದಕ್ಷತೆ, ಕಾರ್ಯಕ್ಷಮತೆ, ತ್ವರಿತ ಕಾರ್ಯನಿರ್ವಹಣೆ ವಿಧಾನಗಳನ್ನು ಉತ್ತಮಪಡಿಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಾಮರ್ಥ್ಯ ಅಭಿವೃದ್ಧಿ ಪಡಿಸಿಕೊಳ್ಳಲು ತರಬೇತಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಹೇಳಿದರು.

ಧಾರವಾಡ ಗಾಂಧಿನಗರದ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಇಂದು ಜಿಲ್ಲಾ ಮಟ್ಟದ "ಎ" ಗ್ರೂಪ್ ಅಧಿಕಾರಿಗಳಿಗೆ ರಾಷ್ಟ್ರೀಯ ಇ ಗವರ್ನೆನ್ಸ್ ವಿಭಾಗ ಆಯೋಜಿಸಿದ್ದ ಸೈಬರ್ ಸೆಕ್ಯುರಿಟಿ ಮತ್ತು ಇ-ಆಡಳಿತ ಕಾರ್ಯಾಗಾರ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಎಲ್ಲಾ ಇಲಾಖೆಗಳ ಅನುಭವ ಹೊಂದಿರುವ ಹಿರಿಯ ಅಧಿಕಾರಿಗಳೇ ಇಂದಿನ ತರಬೇತಿಯಲ್ಲಿ ಭಾಗವಹಿಸಿರುವುದು ಸಂತಸದ ಸಂಗತಿ. ಆಡಳಿತದ ಎಲ್ಲಾ ಕಾರ್ಯಗಳನ್ನೂ ನಿರ್ವಹಿಸುವ ಸಾಮರ್ಥ್ಯ ಅಧಿಕಾರಿಗಳು ಹೊಂದಿದ್ದರೆ, ಅಧೀನ ಅಧಿಕಾರಿಗಳು, ಸಿಬ್ಬಂದಿಯಲ್ಲಿ ಗೌರವ ಹೆಚ್ಚಾಗುತ್ತದೆ. ಹೆಚ್ಚು ಹೆಚ್ಚು ತಂತ್ರಜ್ಞಾನದ ತಿಳುವಳಿಕೆ ಹೊಂದಿದ್ದರೆ, ದಕ್ಷ ಆಡಳಿತ ನಿರ್ವಹಣೆ ಸಾಧ್ಯ. ತಾಂತ್ರಿಕತೆ ಅಳವಡಿಕೆಯಿಂದ ಭ್ರಷ್ಟಾಚಾರ ನಿಯಂತ್ರಣ ಮಾಡಲು ಸಾಕಷ್ಟು ಅವಕಾಶಗಳಿವೆ. ಹಣಕಾಸು ವಂಚನೆ, ಮೋಸದ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸಾಧ್ಯವಿದೆ. ಅಧಿಕಾರಿಗಳು ಕಂಪ್ಯೂಟರ್ ಆಧಾರಿತ ಪ್ರಾಯೋಗಿಕ ತರಬೇತಿಗೆ ಹೆಚ್ಚು ಒತ್ತು ನೀಡಬೇಕು ಎಂದರು.

ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯೆ ಎ.ಎಸ್.ಕವಿತಾ ಮಾತನಾಡಿ, ರಾಷ್ಟ್ರೀಯ ಇ ಗವರ್ನೆನ್ಸ್ ಇದೀಗ ಎರಡನೇ ಹಂತದಲ್ಲಿದೆ. ಸೈಬರ್ ಭದ್ರತೆ ಮತ್ತು ಇ ಆಡಳಿತದ ಕುರಿತು ಎಲ್ಲಾ ಅಧಿಕಾರಿಗಳ ಸಾಮರ್ಥ್ಯ ವರ್ಧನೆಗೆ ಈ ತರಬೇತಿ ಆಯೋಜಿಸಲಾಗಿದೆ ಎಂದರು.

ಎಸ್ ಡಿ ಎಂ ಎಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ವಿಭಾಗದ ಮುಖ್ಯಸ್ಥ ಡಾ.ಎಸ್.ಎಂ.ಜೋಶಿ ವೇದಿಕೆಯಲ್ಲಿ ಇದ್ದರು.

Edited By : Nirmala Aralikatti
Kshetra Samachara

Kshetra Samachara

01/03/2021 01:03 pm

Cinque Terre

21.56 K

Cinque Terre

2

ಸಂಬಂಧಿತ ಸುದ್ದಿ