ಕುಂದಗೋಳ: ಪಟ್ಟಣದ ತಹಶೀಲ್ದಾರ್ ಅಶೋಕ್ ಶಿಗ್ಗಾಂವಿ ಅವರ ನೇತೃತ್ವದಲ್ಲಿ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಬೆಳಿಗ್ಗೆ 11 ಗಂಟೆಗೆ ನಡೆದ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಲೋಕೋಪಯೋಗಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪಟ್ಟಣ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ವಲಯ ಅರಣ್ಯ ಇಲಾಖೆ, ಸೇರಿದಂತೆ ಕುಂದಗೋಳ ತಾಲೂಕಿನ ಪ್ರತಿಯೊಂದು ಇಲಾಖೆಯ ಮಾಹಿತಿಯನ್ನು ತಹಶೀಲ್ದಾರ್ ಅಶೋಕ್ ಶಿಗ್ಗಾಂವಿ ಆಲಿಸಿದರು.
ಬಳಿಕ ಪ್ರತಿಯೊಂದು ಇಲಾಖೆಯಲ್ಲಿ ಹಿಂದುಳಿದ ಕೆಲಸ ಆದಷ್ಟು ಶೀಘ್ರ ಮುಗಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ತಿಳಿಸಿದರು.
Kshetra Samachara
04/08/2021 09:46 pm