ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಅಗ್ನಿ ಶಾಮಕ ಠಾಣೆಗೆ ಚಾಲನೆ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ

ಧಾರವಾಡ: ಧಾರವಾಡ ತಾಲೂಕಿನ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ನೂತನವಾಗಿ ಸ್ಥಾಪಿಸಲಾದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಠಾಣೆಯನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಬುಧವಾರ ಉದ್ಘಾಟಿಸಿದರು.

ಚೆನ್ನಮ್ಮನ ಕಿತ್ತೂರಿನಲ್ಲಿ ನಡೆದ ಕಾರ್ಯಕ್ರಮವನ್ನು ಮುಗಿಸಿಕೊಂಡು ನೇರವಾಗಿ ಬೇಲೂರಿಗೆ ಬಂದ ಸಚಿವರಿಗೆ ಅಗ್ನಿಶಾಮಕ ದಳದವರು ಗೌರವ ವಂದನೆ ಸಲ್ಲಿಸಿದರು.

ನಂತರ ಸಚಿವರು ನೂತನ ಕಟ್ಟಡ, ಅಗ್ನಿಶಾಮಕ ವಾಹನಗಳಿಗೆ ಚಾಲನೆ ನೀಡಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ಅಮೃತ ದೇಸಾಯಿ ಸೇರಿದಂತೆ ಅಗ್ನಿಶಾಮಕ ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು.

Edited By : Manjunath H D
Kshetra Samachara

Kshetra Samachara

08/09/2021 05:53 pm

Cinque Terre

41.98 K

Cinque Terre

0

ಸಂಬಂಧಿತ ಸುದ್ದಿ