ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಗಣೇಶ ಹಬ್ಬದ ನಿಮಿತ್ತ ಹೆಚ್ಚುವರಿ ಬಸ್ ವ್ಯವಸ್ಥೆ

ಹುಬ್ಬಳ್ಳಿ: ಗೌರಿ ಗಣೇಶ ಹಬ್ಬ ಮುಗಿಸಿ ಹಿಂದಿರುಗುವವರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗದಿಂದ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್ . ರಾಮನಗೌಡರ ತಿಳಿಸಿದ್ದಾರೆ.

ಗಣೇಶ ಹಬ್ಬ ಮುಗಿಸಿ ಕೆಲಸ ಕಾರ್ಯಗಳಿಗೆ ಮರಳಲು ಜನರು ಬಸ್ ನಿಲ್ದಾಣದ ಕಡೆ ಬರತೊಡಗಿದರು. ಸಂಜೆಯಿಂದ ಹೊಸೂರು ಹಾಗೂ ಗೋಕುಲ ರಸ್ತೆ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿತ್ತು. ನಿತ್ಯದ ಬಸ್‌ಗಳೊಂದಿಗೆ ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಯಿತು ಎಂದು ಹೇಳಿದ್ದಾರೆ. ಜಿಲ್ಲೆಯೊಳಗೆ , ಹೊರಜಿಲ್ಲೆಗಳಾದ ಗದಗ , ಬೆಳಗಾವಿ , ಬಾಗಲಕೋಟೆ , ವಿಜಯಪುರ ಮತ್ತಿತರ ಕಡೆಗೆ ಹೆಚ್ಚಿನ ಜನ ಸಂಚಾರವಿತ್ತು. ದೂರದ ಸ್ಥಳಗಳಾದ ಬೆಂಗಳೂರು ಮುಂಬೈ , ಪುಣೆ, ಗೋವಾ ಮತ್ತಿತರ ಸ್ಥಳಗಳಿಗೆ ಹೆಚ್ಚುವರಿ ಬಸ್‌ಗಳು ತೆರಳಿದವು, ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ವೋಲ್ವೋ ಸ್ಲಿಪರ್, ರಾಜಹಂಸ, ವೇಗದೂತ ಸೇರಿದಂತೆ ಎಲ್ಲಾ ಬಗೆಯ ಸಾರಿಗೆಗಳನ್ನು ರಸ್ತೆಗಿಳಿಸಲಾಗಿತ್ತು. ಒಟ್ಟು 55 ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಯಿತು. ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

13/09/2021 10:28 am

Cinque Terre

20.59 K

Cinque Terre

0

ಸಂಬಂಧಿತ ಸುದ್ದಿ