ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿರತೆ ಪ್ರತ್ಯಕ್ಷವಾದ ಬೆನ್ನಲ್ಲೇ ಹಳೆಯ ಕಟ್ಟಡ ತೆರವಿಗೆ ಮುಂದಾದ ಜಿಲ್ಲಾಡಳಿತ...!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಚಿರತೆ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಕೇಂದ್ರೀಯ ವಿದ್ಯಾಲಯದ ಆವರಣದಲ್ಲಿರುವ ಹಳೆ ಕಟ್ಟಡ ನೆಲಸಮಗೊಳಿಸುವ ಕಾರ್ಯ ಇಂದು ಸಂಜೆಯಿಂದ ಆರಂಭವಾಗಿದೆ. ಹೌದು..ಜಿಲ್ಲಾಧಿಕಾರಿ ನಿತೇಶ ಪಾಟೀಲ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ, ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ್ ಕ್ಷೀರಸಾಗರ, ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸೌರಭ ಕುಮಾರ ಅವರು ಸ್ಥಳದಲ್ಲಿದ್ದು,ಕಾರ್ಯಾಚರಣೆಗೆ ಮಾರ್ಗದರ್ಶನ ಮಾಡಿದರು.

ಈಗಾಗಲೇ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಜಿಲ್ಲಾಡಳಿತ ನಿರ್ಧಾರ ಕೈಗೊಂಡಿದ್ದು, ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಹಳೆಯ ಕಟ್ಟಡ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.

Edited By : Nirmala Aralikatti
Kshetra Samachara

Kshetra Samachara

21/09/2021 06:58 pm

Cinque Terre

15.41 K

Cinque Terre

5

ಸಂಬಂಧಿತ ಸುದ್ದಿ